

ವಿಜಯವಾಣಿ ಸುದ್ದಿಜಾಲ ಧಾರವಾಡ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಚರಿಸುವ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 156ನೇ ಜಯಂತಿಯ ಅಂಗವಾಗಿ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ. ಪ್ರೌಢ ಶಾಲಾ ವಿಭಾಗದಲ್ಲಿ ಸ್ವಚ್ಛತೆಯ ಪಾಠ- ಗಾಂಧೀಜಿಯವರ ಸಂದೇಶ, ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ, ಗಾಂಧೀಜಿಯವರ ಸ್ವಾತಂತ್ರ‍್ಯದ ಕನಸು- ನನ್ನ ಕಲ್ಪನೆ ವಿಷಯಗಳಲ್ಲಿ ಒಂದರ ಕುರಿತು 700ರಿಂದ 800 ಪದ ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿ ಅಸ್ಪೃಶ್ಯತೆ ನಿವಾರಣೆಯಲ್ಲಿ ಗಾಂಧೀಜಿಯವರ ಹೋರಾಟ, ಇಂದಿನ ಸಮಾಜದಲ್ಲಿ ಸರ್ವೋದಯ ಮತ್ತು ಅಂತ್ಯೋದಯದ ಪ್ರಾಸಂಗಿಕತೆ, ಬದಲಾವಣೆ ನನ್ನಿಂದಲೇ ಆರಂಭ- ಗಾಂಧೀಜಿಯವರ ಪಾಠ ವಿಷಯಗಳಲ್ಲಿ ಒಂದರ ಕುರಿತು 900ರಿಂದ 1,000 ಪದ ಮಿತಿ ಇರುತ್ತದೆ. ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಗಾಂಧೀಜಿ ಕಂಡ ನ್ಯಾಯಸಮ್ಮತ ರಾಜಕೀಯ ವ್ಯವಸ್ಥೆ, ಗಾಂಧೀಜಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್- ತತ್ವಗಳ ಹೋಲಿಕೆ, ಮೌಲ್ಯಾಧಾರಿತ ನಾಯಕತ್ವ ಹಾಗೂ ನೈತಿಕ ರಾಜಕಾರಣ- ಯುವಕರಿಗೆ ಗಾಂಧೀಜಿಯವರ ಪಾಠ ವಿಷಯಗಳಲ್ಲಿ ಒಂದರ ಕುರಿತು 1,400 ರಿಂದ 1,500 ಪದ ಮಿತಿ ಇದೆ. ಶಾಲೆ- ಕಾಲೇಜುಗಳಿಂದ ಸೆ. 6ರೊಳಗೆ ಸ್ಪರ್ಧೆ ಆಯೋಜಿಸಿ ಮೌಲ್ಯಮಾಪನ ಮಾಡಿ 12ರೊಳಗೆ ವಿಜೇತರ ವಿವರ ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಬೇಕು. ಪ್ರತಿ ವಿಭಾಗದಲ್ಲಿ ಅತ್ಯುತ್ತಮ ಮೂರು ಪ್ರಬಂಧಗಳಿಗೆ ಅ. 2ರಂದು ಜಿಲ್ಲಾ ಮಟ್ಟದ ಗಾಂಽ ಜಯಂತಿ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಾಗುವುದು. ಮಾಹಿತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.