

ಧಾರವಾಡ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗಾಂಧಿ ಜಯಂತಿ ಅಂಗವಾಗಿ ಸೆ.6ರಂದು ಧಾರವಾಡ ನಗರದ ಸರಕಾರಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ.
ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕುಂದಗೋಳ ಪಟ್ಟಣದ ಎಸ್.ಎಸ್.ಬಾಲಿಕಾ ಪ್ರೌಢಶಾಲಾ ವಿದ್ಯಾರ್ಥಿನಿ ಪವಿತ್ರಾ ಹೂಗಾರ, ದ್ವಿತೀಯ ಸ್ಥಾನವನ್ನು ಅಂಚಟಗೇರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಾಗರತ್ನ ಹಳೆಮನಿ ಮತ್ತು ತೃತೀಯ ಸ್ಥಾನವನ್ನು ಕಲಘಟಗಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ದಾನೇಶ್ವರಿ ಹುಬ್ಬಳ್ಳಿ ಅವರು ಪಡೆದಿದ್ದಾರೆ.
ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ನಲವಡಿ ಎಸ್.ಕೆ.ಟಿ.ಎಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಭಿಷೇಕ ಅಡಾಡಿ, ದ್ವಿತೀಯ ಸ್ಥಾನವನ್ನು ಹುಬ್ಬಳ್ಳಿ ವಿದ್ಯಾನಗರದ ಜಿ.ಜಿ.ಕಾಲೇಜು ಆಫ್ ಕಾಮರ್ಸ್ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ರಾಯಚೂರ ಮತ್ತು ತೃತೀಯ ಸ್ಥಾನವನ್ನು ಧಾರವಾಡ ಆರ್.ಎನ್.ಶೆಟ್ಟಿ ಕ್ರೀಡಾಂಗಣದ ಸ.ಪ.ಪೂ.ಕಾಲೇಜುನ ವಿದ್ಯಾರ್ಥಿನಿ ಭೂಮಿಕಾ ಅಂಗಡಿ ಪಡೆದಿದ್ದಾರೆ.
ಪದವಿ ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕಲಘಟಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುನ ವಿದ್ಯಾರ್ಥಿನಿ ಐಶ್ವರ್ಯ ಬಮ್ಮಿಗಟ್ಟಿ, ದ್ವಿತೀಯ ಸ್ಥಾನವನ್ನು ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಶ್ವೇತಾ. ಬಿ. ಮತ್ತು ತೃತೀಯ ಸ್ಥಾನವನ್ನು ಧಾರವಾಡ ಎಸ್.ಸಿ.ಎಂ.ಎಸ್. ಪದವಿ ಕಾಲೇಜುನ ವಿದ್ಯಾರ್ಥಿ ಸಾಯಿರಾಜ ನೇಸರೇಕರ ಅವರು ಪಡೆದಿದ್ದಾರೆ.
ಪ್ರಬಂಧ ಸ್ಪರ್ಧೆ ವಿಜೇತರಿಗೆ ಅಕ್ಟೋಬರ 2 ರಂದು ಧಾರವಾಡದಲ್ಲಿ ಜರುಗುವ ಜಿಲ್ಲಾಮಟ್ಟದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.