ಬಾಪೂಜಿ ಪ್ರಬಂಧ ಸ್ಪರ್ಧೆ: ಜಿಲ್ಲಾ ಪಂಚಾಯಿತಿಯಿಂದ ವಿಜೇತರ ಪಟ್ಟಿ ಪ್ರಕಟ

Mandya Ceo K.R.Nandini
Published on

ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಸರ್ಕಾರಿ ಕಾಲೇಜು(ಸ್ವಾಯತ್ತ) ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ಪ್ರೌಢಶಾಲಾ ವಿಭಾಗ: ಪಾಂಡವಪುರ ತಾಲೂಕು ಟಿ.ಎಸ್. ಛತ್ರ ಸರ್ಕಾರಿ ಪ್ರೌಢಶಾಲೆಯ ಮಹಾಲಕ್ಷ್ಮೀ(ಪ್ರ), ಮಂಡ್ಯ ಗ್ಲೋಬಲ್ ಪಬ್ಲಿಕ್ ಶಾಲೆಯ ಕೆ.ಎಸ್.ದೀಪ್ತಿಶ್ರೀ(ದ್ವಿ), ಮದ್ದೂರು ತಾಲೂಕು ಪೂರ್ಣಪ್ರಜ್ಞಾ ಶಾಲೆಯ ಎಸ್.ಪಿ.ಚಂದನಾ(ತೃ), ಪದವಿ ಪೂರ್ವ ಶಿಕ್ಷಣ ವಿಭಾಗ: ಮಂಡ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ(ಮಾಜಿ ಪುರಸಭೆ) ಲಕ್ಷ್ಮೀ(ಪ್ರ), ಮಂಡ್ಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ(ಕಲ್ಲುಕಟ್ಟಡ) ನಿಸರ್ಗ(ದ್ವಿ), ಕೆ.ಆರ್.ಪೇಟೆ ತಾಲೂಕು ಹರಿಹರಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಛಾಯಾವತಿ(ತೃ), ಪದವಿ-ಸ್ನಾತಕೋತ್ತರ ಪದವಿ ವಿಭಾಗ: ನಾಗಮಂಗಲ ತಾಲೂಕು ಆದಿಚುಂಚನಗಿರಿ ಕಲಾ ವಾಣಿಜ್ಯ ಕಾಲೇಜಿನ ಬಿ.ಎಸ್.ನೇತ್ರಾ(ಪ್ರ), ಮಂಡ್ಯ ಸರ್ಕಾರಿ ಮಹಿಳಾ ಕಾಲೇಜಿನ(ಸ್ವಾಯತ್ತ) ಎಸ್.ಯುಕ್ತಿ(ದ್ವಿ), ಮದ್ದೂರು ತಾಲೂಕು ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎ.ಎಸ್.ಭವಾನಿ(ತೃ) ಸ್ಥಾನ ಪಡೆದಿದ್ದಾರೆಂದು ಜಿಪಂ ಸಿಇಒ ಕೆ.ಆರ್.ನಂದಿನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net