

ಮೈಸೂರು: ಮೂಲಸೌಕರ್ಯ ಅನುಷ್ಠಾನಕ್ಕೆ ಆಗ್ರಹಿಸಿ ಮೈಸೂರು ಪೂರ್ವ ವಲಯ ಬಡಾವಣೆಗಳ ಒಕ್ಕೂಟದ ಆಶ್ರಯದಲ್ಲಿ ಸಾರ್ವಜನಿಕರು ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಯರಗನಹಳ್ಳಿ ಬಡಾವಣೆಯಲ್ಲಿರುವ ಮೆಗಾ ಡೇರಿ ಮುಂಭಾಗದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಕಾಲ್ನಡಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಪ್ರತಿಭಟನೆ ನಡೆಸಿದರು.
ಮೈಸೂರು ಪೂರ್ವ ವಲಯ ವ್ಯಾಪ್ತಿಯ 30 ಬಡಾವಣೆಗಳಲ್ಲಿ ಇನ್ನೂ ಬಗೆಹರಿಯದ ವಿವಿಧ ಜ್ವಲಂತ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಾವು ಈಗಾಗಲೇ ಜಿಲ್ಲೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಆದರೆ, ಈವರೆಗೆ ಯಾವುದೇ ರೀತಿಯ ಆಶಾಭಾವನೆ ಕಂಡುಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.