ಪೌರ ಕಾರ್ವಿುಕರಿಂದ ಬಾರಕೋಲು ಚಳವಳಿ

baarkolu
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಇಲ್ಲಿಯ ಮಹಾನಗರ ಪಾಲಿಕೆ ಕಚೇರಿ ಎದುರು ಕಳೆದ 6 ದಿನಗಳಿಂದ ಅನಿರ್ದಿಷ್ಟ ಅವಧಿಯ ಧರಣಿ ಸತ್ಯಾಗ್ರಹ ನಡೆಸುತ್ತಿರುವ ನೇರ ಪಾವತಿ ಹಾಗೂ ಗುತ್ತಿಗೆ ಪೌರ ಕಾರ್ವಿುಕರು ಮಂಗಳವಾರ ಬಾರಕೋಲು ಚಳವಳಿ ನಡೆಸಿದರು.

ಬಾರಕೋಲಿನಿಂದ ಮೈಮೇಲೆ ಹೊಡೆದುಕೊಂಡು ರಾಜ್ಯಸರ್ಕಾರ ಹಾಗೂ ಪಾಲಿಕೆ ಆಯುಕ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಧರಣಿ ಸತ್ಯಾಗ್ರಹ ನಿರತರನ್ನು ಸೋಮವಾರ ಭೇಟಿ ಮಾಡಿದ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಬೇಡಿಕೆಗಳಿಗೆ ಸ್ಪಂದಿಸದೇ ನಕಾರಾತ್ಮಕವಾಗಿ ನಡೆದುಕೊಂಡಿದ್ದಾರೆ. ಸರ್ಕಾರದ ಆದೇಶಗಳ ಅನುಷ್ಠಾನಕ್ಕೆ ಮುಂದಾಗಿಲ್ಲ. ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಆಯುಕ್ತರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದು ಧಾರವಾಡ ಜಿಲ್ಲಾ ಎಸ್​ಸಿ ಎಸ್​ಟಿ ಪೌರ ಕಾರ್ವಿುಕರ ಮತ್ತು ನೌಕರರ ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net