ತ್ರಾಸಿ ಬೈಪಾಸ್ ಜಂಕ್ಷನ್‌ನಲ್ಲಿ ಬ್ಯಾರಿಕೇಡ್ ಅಳವಡಿಕೆ

barricade
ತ್ರಾಸಿ ಬೈಪಾಸ್ ಜಂಕ್ಷನ್‌ನಲ್ಲಿ ಬ್ಯಾರಿಕೇಡ್ ಅಳವಡಿಸಿ ಗಂಗೊಳ್ಳಿ ಪೊಲೀಸ್ ಠಾಣೆಗೆ ಸೋಮವಾರ ಹಸ್ತಾಂತರಿಸಲಾಯಿತು.
Published on

ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಿಯಂತ್ರಣಕ್ಕೆ ತ್ರಾಸಿ ಗ್ರಾಪಂ ವತಿಯಿಂದ ದಾನಿಗಳ ಮೂಲಕ ತ್ರಾಸಿ ಬೈಪಾಸ್ ಜಂಕ್ಷನ್‌ನಲ್ಲಿ ಬ್ಯಾರಿಕೇಡ್ ಅಳವಡಿಸಿ ಗಂಗೊಳ್ಳಿ ಪೊಲೀಸ್ ಠಾಣೆಗೆ ಸೋಮವಾರ ಹಸ್ತಾಂತರಿಸಲಾಯಿತು.

ತ್ರಾಸಿ ಗ್ರಾಪಂ ಅಧ್ಯಕ್ಷ ಮಿಥುನ್ ಎಂ.ಡಿ.ಬಿಜೂರು ಗಂಗೊಳ್ಳಿ ಪೊಲೀಸ್ ಠಾಣೆ ಉಪನಿರೀಕ್ಷಕ ಪವನ್ ನಾಯಕ್ ಅವರಿಗೆ ಬ್ಯಾರಿಕೇಡ್ ಹಸ್ತಾಂತರಿಸಿ ತ್ರಾಸಿ ಗ್ರಾಮಸ್ಥರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದರು.

ತ್ರಾತಿ ಪಿಡಿಒ ಶೋಭಾ ಎಸ್., ಕಾರ್ಯದರ್ಶಿ ಶೋಭಾ ಗಂಗೊಳ್ಳಿ, ರಿಕ್ಷಾ ಚಾಲಕರು, ಮಾಲೀಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net