ಬ್ಯಾರಿಕೇಡ್ ನಿರ್ಮಾಣಕ್ಕೆ ಚಾಲನೆ-  ಕಾಡಾನೆ ದಾಳಿ ತಡೆಗೆ ಕ್ರಮ

Oplus_16908288
Oplus_16908288
Published on

ಸಿದ್ದಾಪುರ : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಲ್ದಾರೆ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಬುಧವಾರ ಚಾಲನೆ ನೀಡಲಾಯಿತು.

ಮಾಲ್ದಾರೆ,ಘಟ್ಟದಹಳ್ಳ ಪ್ರದೇಶದ 8 ಕಿ.ಮೀ. ವ್ಯಾಪ್ತಿಯಲ್ಲಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ 22 ಕೋಟಿ ರೂ. ಬಿಡುಗಡೆ ಮಾಡಿದೆ ಎಂದರು. ಕೊಡಗು ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಪ್ರಾಣಿಗಳ ಸಂಘರ್ಷ ಹಲವು ವರ್ಷಗಳಿಂದಲೂ ಇದೆ. ಇದರಿಂದ ಸ್ಥಳೀಯರು ಸಾಕಷ್ಟು ನೊಂದಿದ್ದಾರೆ.

ವನ್ಯಪ್ರಾಣಿ ಹಾವಳಿಯನ್ನು ಶಾಶ್ವತವಾಗಿ ನಿಯಂತ್ರಿಸಲು ಅಗತ್ಯವಿರುವ ಕಡೆ ರೈಲ್ವೆ ಬ್ಯಾರಿಕೇಡ್, ಸೋಲಾರ್ ಬೇಲಿ ಹಾಗೂ ಆನೆ ಕಂದಕ ನಿರ್ಮಾಣಕ್ಕೆ ಮುಂದಾಗಲಾಗಿದೆ ಎಂದರು. ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ವಿರಾಜಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ, ಕುಶಾಲನಗರ ವಲಯ ಅರಣ್ಯ ಅಧಿಕಾರಿ ರತನ್ , ತಿತಿಮತಿ ವಲಯ ಅರಣ್ಯ ಅಧಿಕಾರಿ ಗೋಪಾಲ ಇತರರು ಹಾಜರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net