ಶಿಕ್ಷಣಕ್ಕೆ ಆದ್ಯತೆ ನೀಡಿದ್ದ ಬಸಮ್ಮತಾಯಿ

RON-1
ರೋಣದದಲ್ಲಿ ಮಾತೋಶ್ರೀ ಬಸಮ್ಮ ಸಂಗನಗೌಡ ಪಾಟೀಲ ಅವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮವನ್ನು ಡಾ. ಆರ್.ಜಿ. ಮಲ್ಲಾಪುರ ಉದ್ಗಾಟಿಸಿದರು.
Published on

ರೋಣ: ಬಡ ಮಕ್ಕಳಿಗೆ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಬಸಮ್ಮತಾಯಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದರು. ಅವರನ್ನು ಕರ್ನಾಟಕದ ಸಾವಿತ್ರಿಬಾಯಿ ಫುಲೆ ಎಂದರೆ ತಪ್ಪಾಗದು ಎಂದು ಚಂದನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಟಿ. ಈಶ್ವರ ಹೇಳಿದರು.

ಭಾನುವಾರ ಪಟ್ಟಣದ ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆಯ ಆಯುರ್ವೇದ ಆಸ್ಪತ್ರೆಯ ಆವರಣದಲ್ಲಿ ಮಾತೋಶ್ರೀ ಬಸಮ್ಮ ಸಂಗನಗೌಡ ಪಾಟೀಲ ಅವರ 19ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಎಸ್.ಆರ್. ಪಾಟೀಲ ಪ್ರತಿಷ್ಠಾನ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಗ್ರಾಮೀಣರು ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ದೇಹದ ಆರೋಗ್ಯ ರಕ್ಷಣೆ ಜತೆಗೆ ಕಣ್ಣಿನ ಆರೋಗ್ಯವನ್ನು ಪ್ರತಿಯೊಬ್ಬರೂ ಕಾಪಾಡಿಕೊಳ್ಳಬೇಕು. ಈ ಭಾಗದ ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಹಿರಿಯ ವೈದ್ಯ ಡಾ. ಆರ್.ಜಿ. ಮಲ್ಲಾಪುರ ಕಾರ್ಯಕ್ರಮ ಉದ್ಘಾಟಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net