ಬಸರಾಳು ಗ್ರಾಪಂನ ಎರಡನೇ ಅವಧಿಗೆ ಚುನಾವಣೆ: ಸ್ವರ್ಣಗೌರಿ ಅಧ್ಯಕ್ಷೆ, ಶಾಲಿನಿ ಉಪಾಧ್ಯಕ್ಷರಾಗಿ ಆಯ್ಕೆ

3
Published on

ಮಂಡ್ಯ: ತಾಲೂಕಿನ ಬಸರಾಳು ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಸ್ವರ್ಣಗೌರಿ ಹಾಗೂ ಉಪಾಧ್ಯಕ್ಷರಾಗಿ ಶಾಲಿನಿ ಆನಂದ್ ಅವಿರೋಧವಾಗಿ ಆಯ್ಕೆಯಾದರು. ಇದರೊಂದಿಗೆ ಅಧಿಕಾರವನ್ನು ಕಾಂಗ್ರೆಸ್ ದಕ್ಕಿಸಿಕೊಂಡಿದೆ.

ಗ್ರಾಪಂ ಕಚೇರಿಯಲ್ಲಿ ಸೋಮವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ವರ್ಣಗೌರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶಾಲಿನಿ ಹೊರತುಪಡಿಸಿ ಮತ್ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯೂ ಆದ ತಾಲೂಕು ಪಂಚಾಯಿತಿ ಇಒ ವೇಣು ಅವಿರೋಧದ ಆಯ್ಕೆಯನ್ನು ಘೋಷಣೆ ಮಾಡಿದರು. ಗ್ರಾಪಂನಲ್ಲಿ 18 ಸದಸ್ಯ ಬಲವಿದೆ. ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆಯನ್ನು ಸದಸ್ಯರು ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net