ಅಮರಗೋಳದಲ್ಲಿ ರಥೋತ್ಸವ

Published on

ಹುಬ್ಬಳ್ಳಿ: ತಾಲೂಕಿನ ಅಮರಗೋಳ ಶ್ರೀ ಕೊಟ್ಟೂರು ಬಸವೇಶ್ವರ ಜಾತ್ರೆ ಹಾಗೂ ಗ್ರಾಮದೇವಿಯರ ಉಡಿ ತುಂಬುವ ಕಾರ್ಯಕ್ರಮ ಅಂಗವಾಗಿ ಏ. 30ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಬೆಳಗ್ಗೆ 6.15ಕ್ಕೆ ಶ್ರೀ ಕೊಟ್ಟೂರು ಬಸವೇಶ್ವರ ಹಾಗೂ ದುಂಡಿ ಬಸವೇಶ್ವರ ರುದ್ರಾಭಿಷೇಕ, ಮಧ್ಯಾಹ್ನ 12.15ಕ್ಕೆ ವಿವಿಧ ವಾದ್ಯಮೇಳಗಳೊಂದಿಗೆ ಪಲ್ಲಕ್ಕಿ ಉತ್ಸವ, ಎತ್ತುಗಳ ಮೆರವಣಿಗೆ ನಡೆಯಲಿದೆ. ಸಂಜೆ 6ಕ್ಕೆ 57ನೇ ಮಹಾರಥೋತ್ಸವ ಸಂಭ್ರಮದಿಂದ ನಡೆಯಲಿದೆ.

ಮೇ 1ರಂದು ಬೆಳಗ್ಗೆ 11.30ಕ್ಕೆ ಕೊಟ್ಟೂರು ಬಸವೇಶ್ವರ ಹಾಗೂ ನೀಲಮ್ಮದೇವರ ಲಗ್ನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net