ಬಸವಣ್ಣ ಜೀವನ ಸಂದೇಶ ಅಳವಡಿಕೆ -  ತಹಸೀಲ್ದಾರ್ ಪುರಂದರ ಹೆಗ್ಡೆ ಸಲಹೆ

PTR_30 APR_2
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 38;
Published on

ಪುತ್ತೂರು: ಸಮಾಜದ ದುಷ್ಟ ಪದ್ಧತಿಗಳ ನಿವಾರಣೆಗೆ ಹೋರಾಡಿದ ಬಸವಣ್ಣ ಜೀವನ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಜಯಂತಿ ಆಚರಣೆಗೆ ಅರ್ಥ ಬರುತ್ತದೆ. ಸಾಮಾಜಿಕ ಬದಲಾವಣೆಯ ಹರಿಕಾರರಾಗಿದ್ದ ಅವರು, ಸಮಾನತೆಗೆ ಒತ್ತು ಕೊಟ್ಟಿದ್ದಾರೆ ಎಂದು ತಹಸೀಲ್ದಾರ್ ಪುರಂದರ ಹೆಗ್ಡೆ ಹೇಳಿದರು.

ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಬಸವೇಶ್ವರ ಜಯಂತಿ ಉದ್ಘಾಟಿಸಿ ಮಾತನಾಡಿದರು. ವ್ಯಕ್ತಿ-ವ್ಯಕ್ತಿಗಳ ನಡುವೆ ಮತ್ಸರ-ಅಸಹ್ಯ ಬೇಡ ಎಂದು ಹೇಳಿದ ಕ್ರಾಂತಿಯೋಗಿ ಬಸವಣ್ಣ ಅವರ ಬದುಕೇ ಸಮಾಜಕ್ಕೊಂದು ಉತ್ತಮ ಸಂದೇಶ. ಜಯಂತಿಗಳ ಆಚರಣೆ ನಿಜವಾದ ಅರ್ಥದಲ್ಲಿ ಸಮಾಜಕ್ಕೆ ಅರಿವು ಮೂಡಿಸುವ ಹಾಗಿರಬೇಕು. ಅವರ ಜೀವನದ ಆದರ್ಶ ತತ್ವಗಳ ಮೂಲಕ ‘ಸಮಾಜದ ಆರೋಗ್ಯ’ ಕಾಪಾಡಿದ ವ್ಯಕ್ತಿತ್ವ ಅವರದ್ದಾಗಿದೆ ಎಂದು ತಿಳಿಸಿದರು.

ಅಕ್ಷರದಾಸೋಹ ನಿರ್ದೇಶಕ ವಿಷ್ಣುಪ್ರಸಾದ್ ಉಪಸ್ಥಿತರಿದ್ದರು. ಕಂದಾಯ ಇಲಾಖೆಯ ದಯಾನಂದ್ ಡಿ.ಟಿ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಇಲಾಖೆಯ ಅಽಕಾರಿಗಳು ಹಾಗೂ ಸಿಬಂದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net