ಕಿರಿಜಾಜಿಯಲ್ಲಿ ಬಸವ ಜಯಂತಿ

HUN-MAY-12-5(BASAVA JAYANTHI AT KIRIJAJI)
Published on

ಹುಣಸೂರು: ತಾಲೂಕಿನ ಕಿರಿಜಾಜಿ ಗ್ರಾಮದಲ್ಲಿ ಇತ್ತೀಚೆಗೆ ಬಸವ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಬಸವಜಯಂತಿ ಆಚರಣೆ ಅಂಗವಾಗಿ ಆಯೋಜಿಸಿದ್ದ ಮೆರವಣಿಗೆಗೆ ಸಂಸದ ಪ್ರತಾಪ್‌ಸಿಂಹ ಚಾಲನೆ ನೀಡಿ, ಜಗಜ್ಯೋತಿ ಬಸವೇಶ್ವರರು ವಿಶ್ವಮಾನ್ಯರು. ಪ್ರಧಾನಿ ನರೇಂದ್ರ ಮೋದಿ ಅವರು ಲಂಡನ್‌ನ ಥೇಮ್ಸ್ ನದಿ ದಡದಲ್ಲಿ ಬಸವೇಶ್ವರ ಪ್ರತಿಮೆ ಸ್ಥಾಪಿಸುವ ಮೂಲಕ ಸಾರ್ಥಕ ಕಾರ್ಯ ನಡೆಸಿದರು. ಬಸವಣ್ಣನವರ ಜೀವನಾದರ್ಶಗಳು ನಮಗೆ ದಾರಿದೀಪವಾಗಲಿ ಎಂದರು.


ಶಾಸಕ ಜಿ.ಡಿ.ಹರೀಶ್‌ಗೌಡ ಸಾರ್ವಜನಿಕ ಅನ್ನಸಂತರ್ಪಣೆಗೆ ಚಾಲನೆ ನೀಡಿದರು. ಗಾವಡಗೆರೆ ಶ್ರೀ ಗುರುಲಿಂಗ ಜಂಗಮ ದೇವರ ಮಠದ ಶ್ರೀ ನಟರಾಜ ಸ್ವಾಮೀಜಿ ಆಶೀರ್ವಚನ ನೀಡಿದರು. ಕಿರಿಜಾಜಿ ಬಸವೇಶ್ವರ ಯುವಕರ ಬಳಗದ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net