ಬಸವಣ್ಣನ ವಚನ ಸಾಹಿತ್ಯದಿಂದ ಕ್ರಾಂತಿ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಬಣ್ಣನೆ

Basava Jayanthi)
Published on

ಮಂಡ್ಯ: ಬಸವಣ್ಣನವರು ವಚನ ಸಾಹಿತ್ಯದ ಮೂಲಕ ಸಮಾಜದಲ್ಲಿ ಕ್ರಾಂತಿಯನ್ನು ಸೃಷ್ಟಿ ಮಾಡಿದ್ದರು ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಬಣ್ಣಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಬಸವಣ್ಣ ಜಯಂತ್ಯುತ್ಸವದಲ್ಲಿ ಮಾತನಾಡಿದರು. ವಚನಗಳ ಮೂಲಕ ಬಸವಣ್ಣ ಜನಮಾನಸದಲ್ಲಿ ಉಳಿದಿದ್ದಾರೆ. ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಇಂದಿನ ಯುಗ ಮುನ್ನಡೆಯಬೇಕಿದೆ. 12ನೇ ಶತಮಾನದಲ್ಲಿ ಸಮಾಜದ ಅಂಕು ಡೊಂಕುಗಳನ್ನು ತಿದ್ದಿ ಎಲ್ಲರೂ ಒಂದೇ ಎಂದು ಸಾರಿದರು. ಮೇಲು ಕೀಳಿನ ಭಾವನೆಯನ್ನು ಹೋಗಲಾಡಿಸಿದವರು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಕೃಷ್ಣ ಕುಮಾರ್, ಮುಖಂಡರಾದ ಮಂಜುನಾಥ್, ಎಂ.ಶಿವಕುಮಾರ್, ಜಿ.ಮಾಂತಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net