

ಬಂಟ್ವಾಳ: ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಬಸವಣ್ಣ ಅಸಮಾನತೆಯನ್ನು ಹೋಗಲಾಡಿಸಲು ಹೋರಾಡಿದ ರೀತಿ ಅದ್ಭುತವಾದದ್ದು. ತಾರತಮ್ಯಗಳನ್ನು ನಿವಾರಿಸಿ ಸಾಮಾಜಿಕ ಸಮಾನತೆಯ ಉದಾತ್ತ ಚಿಂತನೆಯನ್ನು ಸಾಕಾರಗೊಳಿಸಲು 12ನೇ ಶತಮಾನದಲ್ಲಿಯೇ ಪಣತೊಟ್ಟ ಮಹಾನುಭಾವ ಬಸವಣ್ಣ ಎಂದು ಕೇಂದ್ರ ಸ್ಥಾನೀಯ ಉಪತಹಸೀಲ್ದಾರ್ ನರೇಂದ್ರನಾಥ್ ಮಿತ್ತೂರು ಹೇಳಿದರು.
ತಾಲೂಕುಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಬುಧವಾರ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಉಪತಹಸೀಲ್ದಾರ್ ನವೀನ್‌ಕುಮಾರ್ ಬೆಂಜನಪದವು ಕಾರ್ಯಕ್ರಮ ಉದ್ಘಾಟಿಸಿದರು. ಕಂದಾಯ ನಿರೀಕ್ಷಕರಾದ ವಿಜಯ್ ಆರ್., ಜನಾರ್ದನ್ ಜೆ., ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವಿಷಯ ನಿರ್ವಾಹಕ ವಿಶುಕುಮಾರ್ ಮೊದಲಾದವರಿದ್ದರು.