ಅದ್ದೂರಿಯಾಗಿ ಬಸವಜಯಂತಿ ಆಚರಣೆ

1001286311
Published on

ಹೊಳೆನರಸೀಪುರ: ಪಟ್ಟಣದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರ ಹಾಗೂ ಸಿದ್ಧಗಂಗಾ ಪರಮಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತ್ಯುತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಶಿವಕುಮಾರಸ್ವಾಮಿ ಸಹಕಾರ ಸಂಘದ ತಾಲೂಕು ಅಧ್ಯಕ್ಷ ಎಚ್.ಅರ್.ಸುರೇಶ್ ತಿಳಿಸಿದ್ದಾರೆ.

ಮೇ 2ರಂದು ಧಾರ್ಮಿಕ ಸಮಾರಂಭ ನಡೆಸಲಾಗುತ್ತದೆ. ಇದಕ್ಕೂ ಮುನ್ನ ಶುಕ್ರವಾರ ಬೆಳಗ್ಗೆ ಶ್ರೀ ಬಸವಣ್ಣ ಹಾಗೂ ಶ್ರೀ ಶಿವಕುಮಾರ ಸ್ವಾಮಿಜಿ ಅವರ ಭಾವಚಿತ್ರವನ್ನು ಪಟ್ಟಣದ ಪ್ರಮುಖಬೀದಿಗಳಲ್ಲಿ ಮೆರವಣಿಗೆ ಮಾಡಲಾಗುವುದು. ಡೊಳ್ಳುಕುಣಿತ, ವೀರಗಾಸೆ, ಪೂಜಾ ಕುಣಿತ ಮೆರವಣಿಗೆಯುದ್ದಕ್ಕೂ ಮೆರಗು ನೀಡಲಿದೆ. ತಾಲೂಕಿನ ತೇಜೂರು ಗ್ರಾಮದ ಸಿದ್ದರಾಮೇಶ್ವರ ಮಠದ ಶ್ರೀ ಕಲ್ಯಾಣ ಸ್ವಾಮಿ, ಟಿ.ಮಾಯಗೌಡನಹಳ್ಳಿ ಗ್ರಾಮದ ರಾಜಾಪುರ ಮಠದ ಸೋಮಶೇಖರ ಶಿವಾಚಾರ್ಯ ಸ್ವಾಮಿ, ಅರಕಲಗೂಡು ದೊಡ್ಡಮಠದ ಶ್ರೀ ಮಲ್ಲಿಕಾರ್ಜುನಸ್ವಾಮಿ, ಮಹದೇವಪುರ ವಿರಕ್ತಮಠದ ಶ್ರೀ ಮಹಾಂತ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅರಣ್ಯ ಸಚಿವ ಈಶ್ವರ್‌ಖಂಡ್ರೆ, ಶಾಸಕ ಎಚ್.ಡಿ.ರೇವಣ್ಣ, ಸಂಸದ ಶ್ರೇಯಸ್ ಪಟೇಲ್ ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಅಖಿಲಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್‌ಬಿದರಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ತಾಲೂಕು ವೀರಶೈವ ನೌಕರರ ಸಂಘದ ಅಧ್ಯಕ್ಷ ಎಂ.ಸಿ.ಕುಮಾರಸ್ವಾಮಿ, ಕಾರ್ಯದರ್ಶಿ ಧರ್ಮಣ್ಣ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಲಿಂಗ, ಮುಖಂಡ ದೇವರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net