ಬಸವಕಲ್ಯಾಣ ಜಿಲ್ಲಾ ಕೇಂದ್ರವಾಗಲಿ :‌ ಒತ್ತಾಯ

basavanna
Published on

ಸ್ವಾಭಿಮಾನಿ ಕಲ್ಯಾಣ ಪರ್ವ ಆಶಯ | ಆರು ಪ್ರಮುಖ ನಿರ್ಣಯಗಳಿಗೆ ಅಸ್ತು



ವಿಜಯವಾಣಿ ಸುದ್ದಿಜಾಲ ಬಸವಕಲ್ಯಾಣ
ಸ್ವಾಭಿಮಾನಿ ಕಲ್ಯಾಣ ಪರ್ವದಲ್ಲಿ ಬಸವಕಲ್ಯಾಣ ಜಿಲ್ಲಾ ಕೇಂದ್ರವಾಗಿಸಬೇಕು ಸೇರಿ ಆರು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಗಿದೆ. ಶ್ರೀ ಜಗದ್ಗುರು ಡಾ.ಚನ್ನಬಸವಾನಂದ ಸ್ವಾಮೀಜಿ ಮಂಡಿಸಿದ ನಿರ್ಣಯಗಳಿಗೆ ಪಾಲ್ಗೊಂಡ ಎಲ್ಲ ಪೂಜ್ಯರು, ಅತಿಥಿಗಳು ಹಾಗೂ ಬಸವ ಭಕ್ತರು ಕರತಾಡನ ಮೂಲಕ ಅನುಮೋದಿಸಿದರು.
ರಾಜ್ಯಾದ್ಯಂತ ನ.೧೧ರಿಂದ ಡಿ.೧ರವರೆಗೆ ಲಿಂಗಾಯತ ಧರ್ಮ ಜಾಗೃತಿ ಅಭಿಯಾನ, ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮರು ಪ್ರಸ್ತಾವನೆ ಸಲ್ಲಿಸಬೇಕು ಎಂದು ಒತ್ತಾಯಿಸಿ ಡಿ.೨೦ರಂದು ಬೆಂಗಳೂರಿನಲ್ಲಿ ಹಕ್ಕೊತ್ತಾಯ ಸಮಾವೇಶ ಆಯೋಜನೆ ಸೇರಿ ಪ್ರಮುಖ ನಿರ್ಣಯಗಳಿಗೆ ಅಸ್ತು ಎನ್ನಲಾಯಿತು.
ಏಪ್ರಿಲ್‌ನಲ್ಲಿ ನವದೆಹಲಿಯಲ್ಲಿ ಲಿಂಗಾಯತ ಮಹಾ ಸಮಾವೇಶ, ಕರ್ನಾಟಕ, ಮಹಾರಾಷ್ಟç ಮತ್ತು ತೆಲಂಗಾಣಗಳಲ್ಲಿ ಲಿಂಗಾಯತ ಧರ್ಮ ಜಾಗೃತಿ ಅಭಿಯಾನ, ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆ ಭರ್ತಿ, ಬಸವಕಲ್ಯಾಣ ಜಿಲ್ಲಾ ಕೇಂದ್ರ ಮಾಡಲು ಸರ್ಕಾರದ ಮೇಲೆ ಒತ್ತಡ ಹೇರಲು ಪರ್ವ ನಿರ್ಧರಿಸಿತು.
ಧರ್ಮಚಿಂತನ ಗೋಷ್ಠಿ: ಪರ್ವದಲ್ಲಿ ಧರ್ಮ ಚಿಂತನ ಗೋಷ್ಠಿ ಉದ್ಘಾಟಿಸಿದ ಮಾಜಿ ಎಂಎಲ್ಸಿ ವಿಜಯಸಿಂಗ್ ಮಾತನಾಡಿ, ಬಸವಣ್ಣನವರ ಸಂದೇಶಗಳು ಕಲ್ಯಾಣಕ್ಕೆ ಸೀಮಿತವಾಗಿರದೆ ವಿಶ್ವವ್ಯಾಪಿಯಾಗಿವೆ. ಲಿಂಗಾಯತ ಧರ್ಮ ಮಾನ್ಯತೆ ಕುರಿತು ಸಿಎಂ ಜತೆ ಚರ್ಚಿಸಿ ಕೇಂದ್ರಕ್ಕೆ ಮರು ಪ್ರಸ್ತಾವನೆ ಸಲ್ಲಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ಶ್ರೀ ಜಗದ್ಗುರು ಡಾ.ಚನ್ನಬಸವಾನಂದ ಸ್ವಾಮೀಜಿ ಮಾತನಾಡಿ, ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡದೆ ಅವಮಾನ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಸರ್ಕಾರ ಪ್ರಯತ್ನಿಸಬೇಕು ಎಂದು ಒತ್ತಾಸೆ ವ್ಯಕ್ತಪಡಿಸಿದರು.
ರಾಷ್ಟಿçÃಯ ಬಸವದಳ ಮಾಜಿ ತಾಲೂಕು ಅಧ್ಯಕ್ಷ ಬಸವರಾಜ ಪಾಟೀಲ್ ಶಿವಪುರ ಮಾತನಾಡಿ, ೧೯೯೮ರಲ್ಲಿ ಪೂಜ್ಯ ಮಾತೆ ಮಹಾದೇವಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಬಸವಕಲ್ಯಾಣ ಅಭಿವೃದ್ಧಿಗೆ ಬನ್ನಿ ಎಂದು ಆಹ್ವಾನಿಸಿದ್ದೆ. ೨೩ ವರ್ಷ ರಾಷ್ಟಿçÃಯ ಬಸವದಳದಲ್ಲಿ ಸೇವೆ ಮಾಡಲು ಮಾತಾಜಿ ಅವಕಾಶ ನೀಡಿದ್ದರು. ಕೆಲ ಪಟ್ಟಭದ್ರ ಹಿತಾಸಕ್ತಿಗಳು ಹೇಳದೆ ಕೇಳದೆ ತೆಗೆದಿದ್ದಾರೆ. ಮತ್ತೆ ಎಲ್ಲರನ್ನು ಒಂದುಗೂಡಿಸಲು ಪ್ರಯತ್ನಿಸುವುದಾಗಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net