ಅಂತರಂಗದ ನಿಯಂತ್ರಣದಿಂದ ಷಟ್‌ಸ್ಥಳ ಮುಟ್ಟಲು ಸಾಧ್ಯ

BASAVA-CHINTANA-AND-SANAMAN-PROGREMME-IN-BASAVA-KENDRA-3.jpg
Published on

ರಾಯಚೂರು
ನಮ್ಮ ಅಂತರಂಗದ ನಿಯಂತ್ರಣದಿಂದ ಷಟ್‌ಸ್ಥಳಗಳನ್ನು ಮುಟ್ಟಲು ಸಾಧ್ಯವಾಗುತ್ತಿದ್ದು, ಆಧ್ಯಾತ್ಮಕ ಕಾರ್ಯಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡಾಗ ಮಾತ್ರ ಸಂತೃಪ್ತಿ ಜೀವನ ಸಾಗಿಸಲು ಸಾಧ್ಯವಿದೆ ಎಂದು ಆಕಾಶವಾಣಿ ಕೇಂದ್ರದ ನಿವೃತ್ತ ಮುಖ್ಯಸ್ಥ ಡಾ.ಬಿ.ಎಂ.ಶರಭೇಂದ್ರಸ್ವಾಮಿ ಹೇಳಿದರು.

ಸ್ಥಳೀಯ ಬಸವಕೇಂದ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಬಸವಾದಿ ಶರಣರು ನೀಡಿದ ಅಷ್ಟಾವರಣ, ಪಂಚಾಚಾರ ಮತ್ತು ಷಟ್‌ಸ್ಥಳನ್ನು ಮುಟ್ಟಲು ಬಸವ ಕೇಂದ್ರಗಳು ಸಹಕಾರಿಯಾಗಿವೆ ಎಂದರು.

ನಿವೃತ್ತ ಪ್ರಾಚಾರ್ಯ ಡಾ.ಪರಮೇಶ್ವರಪ್ಪ ಸಾಲಿಮಠ ಮಾತನಾಡಿ, ಬಸವಾದಿ ಶರಣರ ಚಿಂತನೆಗಳು ಇಂದಿಗೂ ಮಹತ್ವ ಪಡೆದಿದ್ದು, ಅವರ ಚಿಂತನೆ, ತತ್ತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬದುಕನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಾ.ಬಿ.ಎಂ.ಶರಭೇಂದ್ರಸ್ವಾಮಿ, ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥ ವಿ.ಜಿ.ಬಾವಲತ್ತಿ ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬಸವ ಕೇಂದ್ರದ ಅಧ್ಯಕ್ಷ ರಾಚನಗೌಡ ಕೋಳೂರು, ಕಾರ್ಯದರ್ಶಿ ಚೆನ್ನಬಸವಣ್ಣ ಮಹಾಜನಶೆಟ್ಟಿ, ಪದಾಕಾರಿಗಳಾದ ಸಿ.ಬಿ.ಪಾಟೀಲ್, ಚನ್ನಬಸವ, ವೆಂಕಣ್ಣ ಆಶಾಪುರ, ಸರೋಜಮ್ಮ, ಲಕ್ಷ್ಮಿ ಪಟ್ಟಣಶೆಟ್ಟಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net