

ಬೆಂಗಳೂರು: ಬಸವಕಲ್ಯಾಣದಲ್ಲಿ ಮಹಿಳಾ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ಗೆ ಹಿರಿಯ ನಾಯಕರು ಸಲಹೆ ನೀಡಿದ್ದಾರೆ.
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ನಿಂದ ದಿ.ನಾರಾಯಣ ರಾವ್ ಪತ್ನಿ ಮಲ್ಲಮ್ಮ ಹಾಗೂ ವಿಧಾನ ಪರಿಷತ್ ಸದಸ್ಯ ವಿಜಯ್ ಸಿಂಗ್ ಅವರ ಹೆಸರನ್ನ ಹೈಕಮಾಂಡ್ಗೆ ಕಳುಹಿಸಿ ಕೊಡಲು ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಸ್ತಾಪ ಆಯಿತು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಾರಾಯಣರಾವ್ ಅವರ ಪತ್ನಿಗೆ ಟಿಕೆಟ್ ಕೊಡುವುದು ಉಚಿತ. ಬಸವಕಲ್ಯಾಣಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ವಿಜಯೇಂದ್ರ ಅವರನ್ನ ಕಣಕ್ಕಿಳಿಸುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿದೆ. ವಿಜಯೇಂದ್ರನ ವಿರುದ್ಧ ಮಹಿಳಾ ಅಭ್ಯರ್ಥಿಯನ್ನ ಕಣಕ್ಕಿಳಿಸುವುದು ಉತ್ತಮ ಎಂದರು. ಇದನ್ನೂ ಓದಿರಿ 3 ಸಾವಿರ ಹಣ ಕೊಟ್ಟು ನನ್ನ ಕಾರಿಗೆ ಡೀಸೆಲ್ ಹಾಕಿಸದಷ್ಟು ದುರ್ಗತಿ ಬಂದಿಲ್ಲ… ಎನ್ನುತ್ತಲೇ ಸಿಡಿಮಿಡಿಗೊಂಡ ಸವದಿ
ಸಿದ್ದರಾಮಯ್ಯರ ಮಾತಿಗೆ ಈಶ್ವರ್ ಖಂಡ್ರೆ ಕೂಡ ಧ್ವನಿಗೂಡಿಸಿದರು. ಆದರೆ, ವಿಜಯ್ ಸಿಂಗ್ ಸೂಕ್ತ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಚುನಾವಣಾ ಆರ್ಥಿಕ ವಿಚಾರಗಳನ್ನ ನೋಡುವ ಜತೆಗೆ ಧರ್ಮಸಿಂಗ್ ಹೆಸರು ಇರೋದ್ರಿಂದ ವಿಜಯ್ ಸಿಂಗ್ ಆಯ್ಕೆ ಉಚಿತ ಎಂದರು. ಕೆಪಿಸಿಸಿ ಅಧ್ಯಕ್ಷರು ಮತ್ತು ವಿಪಕ್ಷ ನಾಯಕರಿಂದ ಪ್ರತ್ಯೇಕ ಹೆಸರು ಪ್ರಸ್ತಾಪವಾದ ಹಿನ್ನೆಲೆಯಲ್ಲಿ ಆ ಎರಡೂ ಹೆಸರನ್ನು ಹೈಕಮಾಂಡ್ಗೆ ಶಿಫಾರಸು ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ತಿಳಿದು ಬಂದಿದೆ.