ಅಶ್ವಿನಿ ರೆಡ್ಡಿಗೆ ‘ಪ್ರಗತಿಪರ ರೈತ’ ಪ್ರಶಸ್ತಿ

BBGD-17-1
Published on

ಬಸವನಬಾಗೇವಾಡಿ: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ನೇತೃತ್ವದಲ್ಲಿ ಬೀದರದಲ್ಲಿ ನಡೆದ ರಾಜ್ಯಮಟ್ಟದ ಪಶುಮೇಳ ಸಮಾರಂಭದಲ್ಲಿ ತಾಲೂಕಿನ ಮನಗೂಳಿ ಪಟ್ಟಣದ ಪ್ರಗತಿಪರ ರೈತರಾದ ಅಶ್ವಿನಿ ಚಂದ್ರಶೇಖರ ರೆಡ್ಡಿಯವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಪ್ರಗತಿಪರ ರೈತ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಪಶು ಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವಾಣ್, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಆಯುಕ್ತ ಎಸ್.ಆರ್. ನಟೇಶ, ಪಶು ವೈದ್ಯಕೀಯ ಸೇವಾ ಇಲಾಖೆ ನಿರ್ದೇಶಕ ಡಾ. ಎಂ.ಟಿ. ಮಂಜುನಾಥ, ಬಂಡೆಪ್ಪ ಕಾಶಂಪುರೆ, ಈಶ್ವರ ಖಂಡ್ರೆ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net