ಬಸವನಬಾಗೇವಾಡಿ ಬಸವೇಶ್ವರ ಬ್ಯಾಂಕ್ ಚುನಾವಣೆಗೆ 39 ನಾಮಪತ್ರ ಸಲ್ಲಿಕೆ

Published on

ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ಕೋ ಆಪ್‌ರೇಟಿವ್ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ 13 ಸ್ಧಾನಗಳಿಗೆ ನಡೆಯಲಿರುವ ಚುನಾವಣೆಗೆ 39 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶನಿವಾರ ಮುಕ್ತಾಯಗೊಂಡಿದೆ. ಮುಂಬರುವ ಡಿ.29 ರಂದು ಚುನಾವಣೆ ನಡೆಯಲಿದೆ. ಭಾನುವಾರ ನಾಮಪತ್ರ ಪರಿಶೀಲನೆ ಕಾರ್ಯ ನಡೆಸಲಾಗಿದ್ದು, ಎಲ್ಲವೂ ಕ್ರಮಬದ್ಧವಾಗಿವೆ.

ಡಿ.23 ರಂದು ಮಧ್ಯಾಹ್ನ 3 ರೊಳಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಮಧ್ಯಾಹ್ನ 3ರ ನಂತರ ಚುನಾವಣೆ ಕಣದಲ್ಲಿ ಉಳಿದ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಿ ಉಮೇದುದಾರರಿಗೆ ಚುನಾವಣಾ ಚಿಹ್ನೆ ಹಂಚಿಕೆ ಮಾಡಲಾಗುವುದು.

ಡಿ.29 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ರ ವರೆಗೆ ಪಟ್ಟಣದ ತಾಳಿಕೋಟೆ ರಸ್ತೆಯ ಗುರು ಕೃಪಾ ವಿದ್ಯಾಸಂಸ್ಥೆಯ ಗುರು ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಪ್ರಕ್ರಿಯೆ ಜರುಗಲಿದೆ. ನಂತರ ಸಂಜೆ 4ರ ನಂತರ ಅದೇ ಸ್ಥಳದಲ್ಲಿ ಮತ ಎಣಿಕೆ ಕಾರ್ಯ ನಡೆದು, ಅಂದೇ ಲಿತಾಂಶ ಘೋಷಿಸಲಾಗುವುದು ಎಂದು ಚುನಾವಣಾಧಿಕಾರಿ .ಎಸ್.ಎಂ. ಹಂಗರಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net