ಬಸವನಬಾಗೇವಾಡಿಯಲ್ಲಿ 5 ದಿನ ಸಂಭ್ರಮ

Basavanbagewadi, Basaveshwar, Mulanandishwar, Jatra Mahotsava,
ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ಮೂಲನಂದೀಶ್ವರ ಜಾತ್ರಾ ಮಹೋತ್ಸವ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡ ಗಣ್ಯರು. ಎಂ.ಜಿ. ಆದಿಗೊಂಡ, ಈರಣ್ಣ ಪಟ್ಟಣಶೆಟ್ಟಿ, ಶಂಕರಗೌಡ ಬಿರಾದಾರ, ರವಿ ರಾಠೋಡ ಇದ್ದರು.
Published on

ಬಸವನಬಾಗೇವಾಡಿ: ಬಸವೇಶ್ವರ ಮೂಲನಂದೀಶ್ವರ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಾತ್ರಾ ಉತ್ಸವ ಸಮಿತಿ ಅಧ್ಯಕ್ಷ ಎಂ.ಜಿ. ಆದಿಗೊಂಡ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರಾವಣ ಮಾಸದ ಮೂರನೇ ಸೋಮವಾರ ಸೆ.4 ರಿಂದ ಸೆ.8 ರವರೆಗೆ 5 ದಿನ ಅತ್ಯಂತ ವಿಜೃಂಭಣೆಯಿಂದ ಬಸವೇಶ್ವರ (ಮೂಲನಂದೀಶ್ವರ) ಜಾತ್ರಾ ಮಹೋತ್ಸವ ಆಚರಿಸಲಾಗುತ್ತಿದೆ. ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರ, ಬಸವೇಶ್ವರ ಜಾತ್ರಾ ಉತ್ಸವ ಸಮಿತಿ, ಬಸವ ಉತ್ಸವ ಸಮಿತಿ, ರಾಷ್ಟ್ರೀಯ ಬಸವಸೈನ್ಯ ಹಾಗೂ ಬಸವನಬಾಗೇವಾಡಿಯ ಸಕಲ ಭಕ್ತರು ಕಳೆದ 2 ತಿಂಗಳಿಂದ ಸಿದ್ಧತಾ ಕಾರ್ಯಗಳನ್ನು ಮಾಡಿದ್ದಾರೆ ಎಂದರು.

ಈ ಜಾತ್ರೆಗೆ ಕರ್ನಾಟಕ, ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ಹಾಗೂ ದೇಶದ ವಿವಿಧೆಡೆ ಇರುವ ಬಸವಣ್ಣನವರ ಭಕ್ತರು ಆಗಮಿಸುವರು. ಭಕ್ತರಿಗೆ ವಸತಿ, ದಾಸೋಹ, ಸ್ಥಾನಗೃಹ, ಶೌಚಗೃಹ, ಕುಡಿಯುವ ನೀರು ಹಾಗೂ ಅಗತ್ಯ ಮೂಲಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದೆ. ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ, ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರ ಮಾರ್ಗದರ್ಶನದಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ರವಿ ರಾಠೋಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net