ಮಡಿವಾಳೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷರ ಹತ್ಯೆ

BBGD 25-1
Published on

ಬಸವನಬಾಗೇವಾಡಿ: ಪಟ್ಟಣದ ಹೊರವಲಯದಲ್ಲಿರುವ ಮಡಿವಾಳೇಶ್ವರ ಶಾಲೆ ಆವರಣದಲ್ಲಿ ಮಡಿವಾಳೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ದಾಮಲು (ದಾಮು) ನಾಯಕ (55) ಅವರನ್ನು ಹತ್ಯೆ ಮಾಡಲಾಗಿದೆ.
ಸೋಮವಾರ ರಾತ್ರಿಯಿಂದ ಮಂಗಳವಾರ ನಸುಕಿನ ಜಾವದಲ್ಲಿ ಈ ಘಟನೆ ನಡೆದಿದೆ. ಪತಿಯನ್ನು ಹತ್ಯೆ ಮಾಡಲಾಗಿದೆ ಎಂದು ಮೃತನ ಪತ್ನಿ ದೂರು ನೀಡಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ ಅರಸಿದ್ದಿ, ಡಿವೈಎಸ್‌ಪಿ ಈ. ಶಾಂತವೀರ, ಸಿಪಿಐ ಸೋಮಶೇಖರ ಜುಟ್ಟಲ್, ಪಿಎಸ್‌ಐ ಚಂದ್ರಶೇಖರ ಹೆರಕಲ್ಲ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶ್ವಾನದಳ, ಬೆರಳಚ್ಚು ತಜ್ಞರ ತಂಡವೂ ಭೇಟಿ ನೀಡಿ ತನಿಖೆ ನಡೆಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net