ಉತ್ನಾಳ ಕ್ರಾಸ್ ಬಳಿ ಅಪಘಾತ

BBGD 16-4
Published on

ಬಸವನಬಾಗೇವಾಡಿ: ಕೆಎಸ್‌ಆರ್‌ಟಿಸಿ ಬಸ್‌ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ 22ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಾಲಕರೊಬ್ಬರ ಕಾಲಿಗೆ ಗಂಭೀರ ಗಾಯವಾಗಿದೆ.
ವಿಜಯಪುರದಿಂದ ತಾಳಿಕೋಟೆ ಪಟ್ಟಣಕ್ಕೆ ತೆರಳುತ್ತಿದ್ದ ತಾಳಿಕೋಟೆ ಡಿಪೋ ಬಸ್ ಹಾಗೂ ಹೊಸಪೇಟೆಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ವಿಜಯಪುರ 1ನೇ ಘಟಕದ ಬಸ್‌ಗಳ ಮಧ್ಯೆ ಗುರುವಾರ ಸಂಜೆ ಮನಗೂಳಿ ಪೊಲೀಸ್ ಠಾಣೆ ವ್ಯಾಪ್ತಿಯ ಉತ್ನಾಳ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ತಾಳಿಕೋಟೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ರಸ್ತೆ ವಿಭಜಕ ದಾಟಿ ಬಲಭಾಗದಲ್ಲಿ ತೆರಳುತ್ತಿದ್ದ ವಿಜಯಪುರ ಬಸ್‌ಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ವಿಜಯಪುರ 1ನೇ ಘಟಕಕ್ಕೆ ಸೇರಿದ ಬಸ್ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net