ವಿವೇಕಾನಂದ ಶಾಲೆ ವಾರ್ಷಿಕೋತ್ಸವ

HN 15-1
Published on

ವಿಜಯಪುರ: ಬಸವನಬಾಗೇವಾಡಿ ತಾಲೂಕಿನ ಮನಗೂಳಿಯ ವಿವೇಕಾನಂದ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಈಚೆಗೆ ಶಾಲೆ ವಾರ್ಷಿಕೋತ್ಸವ ನಡೆಯಿತು.
ಹಳೇ ವಿದ್ಯಾರ್ಥಿ ದೀಪಕ ಅವಟಿಗೇರ ಮಾತನಾಡಿ, ಶಾಲೆ ಶಿಕ್ಷಕರ ಹಾಗೂ ತಂದೆ ಪವಾಡಪ್ಪ, ತಾಯಿ ಶಾಂತಮ್ಮ ಅವರ ಪರಿಶ್ರಮ, ಪ್ರೋತ್ಸಾಹ, ಮಾರ್ಗದರ್ಶನದಿಂದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣವಾಗಲು ಸಾಧ್ಯವಾಯಿತು ಎಂದರು.
ಕೆಪಿಎಸ್‌ಸಿ ಪರೀಕ್ಷೆಯಲ್ಲಿ 66ನೇ ಸ್ಥಾನ ಪಡೆದು ವಾಣಿಜ್ಯ ತೆರಿಗೆ ಅಧಿಕಾರಿಯಾಗಿ ಆಯ್ಕೆಯಾಗಿರುವ ದೀಪಕ ಅವಟಿಗೇರ ಅವರನ್ನು ಶಾಲೆ ಸಂಸ್ಥಾಪಕ ಅಧ್ಯಕ್ಷ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಸನ್ಮಾನಿಸಿದರು. ತಹಸೀಲ್ದಾರ್ ಚೋರಗಸ್ತಿ, ಹೋಟೆಲ್ ಉದ್ಯಮಿ ಶಾಂತೇಶ ಕಳಸಗೊಂಡ, ಮಾಧವಿ ಸಂಶಿ ಇನ್ನಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net