ಜಂತುಹುಳುಗಳ ನಿವಾರಣೆಗೆ ಅಲ್ಬೆಂಡ್‌ಜೋಲ್ ರಾಮಬಾಣ

BBGD 8-2
Published on

ಬಸವನಬಾಗೇವಾಡಿ: ಜಂತು ಹುಳುಗಳ ಭಾದೆ ನಿವಾರಣೆಗೆ ಅಲ್ಬೆಂಡ್‌ಜೋಲ್ ರಾಮಬಾಣವಾಗಿದೆ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಸ್. ಮೇಟಿ ಹೇಳಿದರು.
ಪಟ್ಟಣದಲ್ಲಿ ಹಮ್ಮಿಕೊಂಡ ಸಮುದಾಯ ಆಧಾರಿತ ರಾಷ್ಟ್ರೀಯ ಜಂತು ಹುಳು ಭಾದೆ ನಿವಾರಣೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಾತ್ರೆ ವಿತರಿಸಿ ಅವರು ಮಾತನಾಡಿದರು.
ಜಂತು ಹುಳುಗಳ ನಿವಾರಣೆಗೆ ಸೆ.7 ರಿಂದ 21ರ ವರೆಗೆ ಕಾರ್ಯಕ್ರಮ ನಡೆಯಲಿದ್ದು, ಈ ವರ್ಷ ಕೋವಿಡ್-19 ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಆಶಾ ಕಾರ್ಯಕರ್ತೆಯರು ಮನೆ-ಮನೆಗಳಿಗೆ ಭೇಟಿ ನೀಡಿ, ಎಲ್ಲ ಮಕ್ಕಳ ವಯಸ್ಸಿಗೆ ಅನುಗುಣವಾಗಿ ಮಾತ್ರೆ ವಿತರಿಸುತ್ತಿದ್ದಾರೆ ಎಂದರು.
ಮಕ್ಕಳಲ್ಲಿ ಜಂತು ಹುಳು ಕಂಡು ಬರುವ ಪರಿಣಾಮ ರಕ್ತಹೀನತೆ, ಪೌಷ್ಟಿಕಾಂಶ ಕೊರತೆ, ಹಸಿವೆಯಾಗದಿರುವುದು, ನಿಶ್ಯಕ್ತಿ, ಆತಂಕ, ಹೊಟ್ಟೆ ನೋವು, ವಾಕರಿಕೆ, ವಾಂತಿ, ಅತಿಸಾರ, ತೂಕ ಕಡಿಮೆಯಾಗುತ್ತದೆ. ಜಂತುಹುಳು ನಿವಾರಣೆ ಅಲ್ಬೆಂಡ್‌ಜೋಲ್ ಮಾತ್ರೆಗಳನ್ನು ಸೇವಿಸಿದಾಗ ಮಕ್ಕಳ ಆರೋಗ್ಯ ಸುಧಾರಣೆಯಾಗುತ್ತದೆ, ಏಕಾಗ್ರತೆ, ಕಲಿಕಾ ಸಾಮರ್ಥ್ಯ, ಹಾಜರಾತಿ ಹೆಚ್ಚಳವಾಗುತ್ತದೆ. ಬಯಲು ಪ್ರದೇಶಗಳಲ್ಲಿ ಮಲ ವಿಸರ್ಜನೆ ಮಾಡಬಾರದು ಹಾಗೂ ಬರಿಗಾಲಿನಲ್ಲಿ ಅಲೆದಾಡಬಾರದು. ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡು ಆರೋಗ್ಯ ವೃದ್ಧಿಗೆ ಮುಂದಾಗಬೇಕೆಂದು ಹೇಳಿದರು.
ಕಿರಿಯ ಆರೋಗ್ಯ ಸಹಾಯಕ ಚಂದ್ರಶೇಖರ ಹದಿಮೂರ, ಆರ್‌ಕೆಎಸ್‌ಕೆನ ಪರಶುರಾಮ ಸೌದಿ ಸೇರಿ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net