ಸರ್ಕಾರದ ಮಾರ್ಗಸೂಚಿಯಂತೆ ಹಬ್ಬ ಆಚರಿಸಿ

BBGD 19-6
Published on

ಬಸವನಬಾಗೇವಾಡಿ: ಜಗತ್ತನ್ನೇ ಕಂಗೆಡಿಸಿದ ಕೋವಿಡ್-19 ಭೀತಿಯ ನಡುವೆ ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬಗಳನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ಸರಳವಾಗಿ ಆಚರಿಸಲು ಎಲ್ಲರೂ ಕೈಜೋಡಿಸೋಣ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಗಣೇಶ ಚತುರ್ಥಿ ಹಾಗೂ ಮೊಹರಂ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ ಶಾಂತಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ತಹಸೀಲ್ದಾರ್ ಎಂ.ಎನ್. ಬಳಿಗಾರ ಮಾತನಾಡಿ, ಗಣೇಶೋತ್ಸವ ಹಾಗೂ ಮೊಹರಂ ಹಬ್ಬಗಳನ್ನು ಸರಳ ಹಾಗೂ ಶಾಂತಿಯುತವಾಗಿ ಆಚರಿಸಬೇಕು. ಯಾವುದೇ ರೀತಿಯ ಮೆರವಣಿಗೆ, ಮನರಂಜನೆ ಕಾರ್ಯಕ್ರಮಗಳಿಗೆ ಅವಕಾಶವಿರುವುದಿಲ್ಲ. ಸಾರ್ವಜನಿಕ ವಲಯಗಳಲ್ಲಿ ಗಣೇಶ ಮೂರ್ತಿಯನ್ನು ವಾರ್ಡಿಗೆ ಒಂದರಂತೆ, ಗ್ರಾಮೀಣ ಭಾಗಗಳಲ್ಲಿ ಗ್ರಾಮಕ್ಕೆ ಒಂದರಂತೆ ಪ್ರತಿಷ್ಠಾಪಿಸಿ ಸ್ಥಳೀಯ ಸಂಸ್ಥೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕೆಂದು ಹೇಳಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂಗನಗೌಡ ಚಿಕ್ಕೊಂಡ, ಸಿಪಿಐ ಸೋಮಶೇಖರ ಜುಟ್ಟಲ, ಪಿಎಸ್‌ಐ ಚಂದ್ರಶೇಖರ ಹೆರಕಲ್, ಸಂಗಮೇಶ ಓಲೇಕಾರ, ಸುರೇಶ ಮಣ್ಣೂರ, ನೀಲಪ್ಪ ನಾಯಕ, ಖಾಜಂಬರ್ ನದ್ಾ ಇತರರು ಮಾತನಾಡಿದರು.
ಪುರಸಭೆ ಮಾಜಿ ಅಧ್ಯಕ್ಷ ಬಸಣ್ಣ ದೇಸಾಯಿ, ಮೈಬೂಬ ಗಣಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net