ಸಮಾನತೆಯ ಸಮಾಜಕ್ಕೆ ಶ್ರಮಿಸಿದ ಬಸವಣ್ಣ

10NGD1
Published on

ನಂಜನಗೂಡು: ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ 12ನೇ ಶತಮಾನದಲ್ಲಿ ಶ್ರಮಿಸಿದ ಬಸವಣ್ಣನವರ ಸಂದೇಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ನೆರವಾಗಬೇಕು ಎಂದು ತಹಸೀಲ್ದಾರ್ ಶಿವಕುಮಾರ್ ಕಾಸನೂರು ಹೇಳಿದರು.


ನಗರದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶುಕ್ರವಾರ ಆಯೋಜಿಸಿದ್ದ ಬಸವ ಜಯಂತಿ ಹಾಗೂ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.


ದೇವರು ಗುಡಿ ಗುಂಡಾರದಲ್ಲಿಯೋ ಅಥವಾ ಬೇರೆಲ್ಲೂ ಇಲ್ಲ. ಮನುಷ್ಯನ ಮನುಷ್ಯತ್ವದಲ್ಲಿ ಅವನ ಇರುವಿಕೆಯಿದೆ ಎಂಬುದನ್ನು ಗುರುತಿಸಿದ ಬಸವಣ್ಣನವರು ಅಂದಿನ ಕಾಲದಲ್ಲಿ ಸಮಾಜವನ್ನಾವರಿಸಿದ್ದ ಅಸಮಾನತೆ, ಮೇಲು-ಕೀಳು ಹಾಗೂ ಅಸ್ಪಶ್ಯತೆಯಂತಹ ಅನಿಷ್ಟ ಆಚರಣೆಗಳನ್ನು ತೊಡೆದು ಹಾಕಲು ಪ್ರಾಮಾಣಿಕವಾಗಿ ಶ್ರಮಿಸಿದರು. ಬಸವಣ್ಣನವರ ವಚನಗಳಲ್ಲಿ ಕಾಯಕದ ಮೂಲಕ ಜೀವನ ಸಾರ್ಥಕತೆಯನ್ನು ಕಂಡುಕೊಳ್ಳಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದರು.


ನಗರಸಭಾ ಪೌರಾಯುಕ್ತ ನಂಜುಂಡಸ್ವಾಮಿ, ಕಂದಾಯ ಅಧಿಕಾರಿ ಶ್ರೀನಿವಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net