ಜಾತಿ ವ್ಯವಸ್ಥೆ ವಿರುದ್ಧ ಧ್ವನಿ ಎತ್ತಿದ್ದ ಬಸವಣ್ಣ

10Kush01
ಕುಶಾಲನಗರ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ವೀರಶೈವ ಮಹಾಸಭಾ ಅಧ್ಯಕ್ಷ ಎಚ್.ವಿ. ಶಿವಪ್ಪ, ಕಾರ್ಯದರ್ಶಿ ಶಾಂಭಶಿವಮೂರ್ತಿ, ಕೋಶಾಧಿಕಾರಿ ಎಚ್.ಪಿ.ಉದಯ್ ಕುಮಾರ್, ಅಮೃತ್, ಕಮಲಾ, ಎಂ.ಬಿ.ಬಸವರಾಜ್, ನಂದೀಶ್ ಇತರರು ಇದ್ದರು.
Published on

ಕುಶಾಲನಗರ: ಹನ್ನೆರಡನೇ ಶತಮಾನದ ಭಕ್ತಿ ಪಂಥದ ಹರಿಕಾರ ಜಗಜ್ಯೋತಿ ಬಸವಣ್ಣ ಸಮಾಜದಲ್ಲಿ ಬೇರೂರಿದ್ದ ಮೇಲು- ಕೀಳು, ಜಾತಿ- ಧರ್ಮ ಹೀಗೆ ನೊಂದವರ ಪರವಾಗಿ ನಿಂತ ಮಹಾನುಭಾವ. ಜಾತಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದ್ದ ಬಸವಣ್ಣನವರು ಕ್ರಾಂತಿಯ ಬೀಜವನ್ನು ಬಿತ್ತಿದ ಹರಿಕಾರ ಎಂದು ತೊರೆನೂರು ಸರ್ಕಾರಿ ಪ್ರೌಢಶಾಲೆಯ ಕನ್ನಡ ಶಿಕ್ಷಕ ಟಿ.ಬಿ.ಮಂಜುನಾಥ್ ತಿಳಿಸಿದರು.

ವೀರಶೈವ- ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕ, ಕುಶಾಲನಗರ ವೀರಶೈವ ಸಮಾಜ ಹಾಗೂ ಜಿಲ್ಲಾ ವೀರಶೈವ- ಲಿಂಗಾಯತ ನೌಕರರ ಸಂಘದ ವತಿಯಿಂದ ಶುಕ್ರವಾರ ಕುಶಾಲನಗರ ಬಸವೇಶ್ವರ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದರು.
ಇವನಾರವ, ಇವನಾರವ ಎಂದೆನ್ನದಿರಯ್ಯ ಇವ ನಮ್ಮವ, ಇವ ನಮ್ಮವ ಎಂದೆನ್ನಿರಯ್ಯ ಎಂದು ಸಮಾಜದ ಎಲ್ಲ ವರ್ಗದ ಜನರನ್ನು ಒಂದುಗೂಡಿಸಿದ ಬಸವಣ್ಣ, ಜಾತೀಯತೆಯ ವಿರುದ್ಧ ಸಮರ ಸಾರಿದರು ಎಂದರು.

ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ವಿ.ಶಿವಪ್ಪ ಮಾತನಾಡಿ, 12ನೇ ಶತಮಾನದಲ್ಲಿ ಶರಣ ಚಳವಳಿಯ ಮೂಲಕ ಹೊಸ ಚಿಂತನೆಯ ಪ್ರವಾಹವನ್ನು ತಂದವರು ಭಕ್ತಿ ಭಂಡಾರಿ ಬಸವಣ್ಣನವರು. ಅವರ ಭಕ್ತಿ, ಕಾಯಕನಿಷ್ಠೆ ನೆನೆಯುವ ದಿನ ಬಸವ ಜಯಂತಿ. ಬಸವಣ್ಣನವರು ಕವಿ, ತತ್ವಜ್ಞಾನಿ, ಸಮಾಜ ಸುಧಾರಕ ಎಂದು ಬಣ್ಣಿಸಿದರು.

ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಟಿ.ಎಸ್.ಶಾಂಭಶಿವಮೂರ್ತಿ, ಕೋಶಾಧಿಕಾರಿ ಎಚ್.ಪಿ.ಉದಯ್ ಕುಮಾರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್, ವೀರಶೈವ ಲಿಂಗಾಯತ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ನಂದೀಶ್, ಪದಾಧಿಕಾರಿಗಳಾದ ಬಿ.ನಟರಾಜ್, ಎಸ್.ವಿರೂಪಾಕ್ಷ, ವೀರಶೈವ ಸಮಾಜದ ಮಾಜಿ ಅಧ್ಯಕ್ಷ ಎಂ.ಬಿ.ಬಸವರಾಜು, ಅಕ್ಕನ ಬಳಗದ ಅಧ್ಯಕ್ಷೆ ಕಮಲಾ ಉದಯ್ ಕುಮಾರ್, ಪದಾಧಿಕಾರಿ ಲತಾ, ಮುಖಂಡರಾದ ಪಿ.ಮಹಾದೇವಪ್ಪ, ವಿ.ಸಿ.ಅಮೃತ್, ಬಿ.ನಟರಾಜ್, ಎಚ್.ಎಸ್.ಪುಟ್ಟರಾಜು, ವಿ.ಸಿ.ಅಮೃತ್, ಟಿ.ಇ.ವಿಶ್ವನಾಥ್ ಇತರರು ಇದ್ದರು.

ದೇವಸ್ಥಾನದ ಅರ್ಚಕ ಚಂದ್ರಶೇಖರ್ ಹೀರೇಮಠ್ ಪೂಜಾ ಕೈಂಕರ್ಯವನ್ನು ನಡೆಸಿಕೊಟ್ಟರು. ಮೊದಲಿಗೆ ಸಮಾಜದ ಮಹಿಳೆಯರು ವಚನ ಗಾಯನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net