ಬಸವಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರ

11-05-Shiva-2
ರಾಯಚೂರಿನ ಕನ್ನಡ ಭವನದಲ್ಲಿ ಕಸಾಪದಿಂದ ಶುಕ್ರವಾರ ಏರ್ಪಡಿಸಿದ್ದ ಬಸವಣ್ಣ ಹಾಗೂ ಹೇಮರಡ್ಡಿ ಜಯಂತಿ ಕಾರ್ಯಕ್ರಮದಲ್ಲಿ ಸಾಹಿತಿಗಳಾದ ವೀರಹನುಮಾನ, ಈರಣ್ಣ ಬೆಂಗಾಲಿ, ರಂಗಕರ್ಮಿ ವಿ.ಎನ್.ಅಕ್ಕಿ, ನಿವೃತ್ತ ಪ್ರಾಚಾರ್ಯ ಡಾ.ಪಿ.ಜಗದೀಶ, ಶಿಕ್ಷಕಿ ಅಕ್ಕಮಹಾದೇವಿ ಉಪ್ಪಿನ್, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ತಾಯಪ್ಪ ಹೊಸೂರು, ತಾಲೂಕು ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ, ಪದಾಕಾರಿಗಳಾದ ರಾವುತ್‌ರಾವ್ ಬರೂರ, ರೇಖಾ ಬಡಿಗೇರ ಇದ್ದರು.
Published on

ರಾಯಚೂರು: ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ತಮ್ಮ ಕಾಯಕ ಪ್ರಜ್ಞೆ ಮತ್ತು ಸಮಾನತೆಯ ತತ್ತ್ವದ ಮೂಲಕ ಸಾಮಾಜಿಕ ಕ್ರಾಂತಿಯನ್ನು ಉಂಟು ಮಾಡಿದ ಹರಿಕಾರರಾಗಿದ್ದಾರೆ ಎಂದು ಶಿಕ್ಷಕಿ ಅಕ್ಕಮಹಾದೇವಿ ಉಪ್ಪಿನ್ ಹೇಳಿದರು.
ಸ್ಥಳೀಯ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನಿಂದ ಶುಕ್ರವಾರ ಏರ್ಪಡಿಸಿದ್ದ ಬಸವಣ್ಣ ಮತ್ತು ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿಶ್ವಕ್ಕೆ ಪ್ರಜಾಪ್ರಭುತ್ವದ ಕಲ್ಪನೆಯನ್ನು ತಮ್ಮ ಅನುಭವ ಮಂಟಪದ ಮೂಲಕ ನೀಡಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ ಎಂದರು.
ಲಿಂಗ ತಾರತಮ್ಯ, ಮೂಢ ನಂಬಿಕೆಗಳನ್ನು ಹೋಗಲಾಡುವುದರ ಜತೆಗೆ ಇಷ್ಠಲಿಂಗ ಪೂಜೆ, ಕಾಯಕ ಪ್ರಜ್ಞೆಯನ್ನು ಜನರಲ್ಲಿ ಮೂಡಿಸಲು ಪ್ರಯತ್ನಿಸಿದರು. ಮನೆಗೆ ಸಿಮೀತವಾಗಿದ್ದ ಮಹಿಳೆಗೆ ಸಾಮಾಜಿಕ ಸ್ಥಾನಮಾನ ಸಿಕ್ಕಿದ್ದು 12ನೇ ಶತಮಾನದಲ್ಲಿ ಎಂದು ಹೇಳಿದರು.
ನಿವೃತ್ತ ಪ್ರಾಚಾರ್ಯ ಡಾ.ಪಿ.ಜಗದೀಶ ಮಾತನಾಡಿ, ಹೇಮರಡ್ಡಿ ಮಲ್ಲಮ್ಮ ಜೀವನ ಮಹಿಳೆಯರಿಗೆ ಸ್ಪೂರ್ತಿದಾಯಕವಾಗಿದೆ. ಮಲ್ಲಮ್ಮನ ಭಕ್ತಿಗೆ ಪ್ರಸನ್ನನಾಗಿ ಶ್ರೀಶೈಲ ಮಲ್ಲಿಕಾರ್ಜುನ ಆಕೆಯ ಮುಂದೆ ಕಾಣಿಸಿಕೊಂಡು ವರ ನೀಡುತ್ತಾನೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ತಾಯಪ್ಪ ಹೊಸೂರು ಮಾತನಾಡಿ, ಶರಣರ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ವಿಚಾರಗಳನ್ನು ಅರಿಯುವುದರ ಜತೆಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಸಾಹಿತಿಗಳಾದ ವೀರಹನುಮಾನ, ಈರಣ್ಣ ಬೆಂಗಾಲಿ, ರಂಗಕರ್ಮಿ ವಿ.ಎನ್.ಅಕ್ಕಿ, ಕಸಾಪ ತಾಲೂಕು ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ, ಪದಾಕಾರಿಗಳಾದ ರಾವುತ್‌ರಾವ್ ಬರೂರ, ರೇಖಾ ಬಡಿಗೇರ, ರಾಮಣ್ಣ ಬೋಯರ್, ದಂಡಪ್ಪ ಬಿರಾದರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net