ಬಸವಣ್ಣನವರ ಮಾರ್ಗದರ್ಶನದಲ್ಲಿ ನಡೆಯೋಣ

ಬಸವಣ್ಣ  ಭಾವಚಿತ್ರ ಅನಾವರಣ
ಬಸವಣ್ಣ ಭಾವಚಿತ್ರ ಅನಾವರಣ
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ವಿಶ್ವಗುರು, ಮಹಾ ಮಾನವತಾವಾದಿ ಬಸವಣ್ಣನವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಮಾರ್ಗದರ್ಶನದಲ್ಲಿ ನಡೆಯೋಣ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಕರ್ನಾಟಕದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದರು.
12ನೇ ಶತಮಾನದಲ್ಲಿ ಸಾಮಾಜಿಕ ಸಮಾನತೆ ಸಾರಿದ ಮಹಾನ್ ಚೇತನ ಬಸವಣ್ಣನವರಿಗೆ ಸಾಮಾಜಿಕ ಬದ್ಧತೆ, ಎಲ್ಲರನ್ನು ಸಮಾನತೆಯಿಂದ ಕಾಣುವ ಆಶಯವಿತ್ತು. 12ನೇ ಶತಮಾನದಲ್ಲಿಯೇ ಅನುಭವ ಮಂಟಪದಲ್ಲಿ ಸಂಸದೀಯ ವ್ಯವಸ್ಥೆ ಇತ್ತು. ಬಸವಣ್ಣನವರ ಆಚಾರ, ವಿಚಾರಗಳು ವಿಶ್ವದಲ್ಲಿ ಹೆಸರು ಪಡೆದಿದೆ. ಜಗತ್ತಿನ ಶ್ರೇಷ್ಠ ವ್ಯಕ್ತಿಗಳಲ್ಲಿ ಬಸವಣ್ಣನವರು ಒಬ್ಬರು ಎಂದರು.
ದೇಶದಲ್ಲಿ ಜನರ ಮಧ್ಯೆ ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ, ಶಾಂತಿ ವ್ಯವಸ್ಥೆ ವೃದ್ಧಿಸುವುದು ಬಸವಣ್ಣನವರ ವಚನಗಳಲ್ಲಿ ಕಾಣಬಹುದು. ಬಸವಣ್ಣನವರ ಹಲವು ಚಿಂತನೆಗಳು ಈಗ ಕಾನೂನುಗಳಾಗಿವೆ. ಕಾಯಕವೇ ಕೈಲಾಸ, ದಾಸೋಹ ಅವರ ಪ್ರತಿಪಾದನೆಯಾಗಿತ್ತು. ಅವರ ಚಿಂತನೆಯಂತೆ ಸಾಮಾಜಿಕ ಸಮಾನತೆಯಿಂದ ಬಾಳೋಣ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net