ಎಐಪಿಟಿಎಫ್ ಅಧ್ಯಕ್ಷರಾಗಿ ಬಸವರಾಜ ಗುರಿಕಾರ ಆಯ್ಕೆ

2 vikram 8
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಅಖಿಲ ಭಾರತ ಪ್ರಾಥಮಿಕ ಶಿಕ್ಷಕರ ಫೆಡರೇಷನ್ (ಎಐಪಿಟಿಎಫ್ ) ಅಧ್ಯಕ್ಷರಾಗಿ ಕರ್ನಾಟಕದ ಬಸವರಾಜ ಗುರಿಕಾರ ಆಯ್ಕೆಯಾಗಿದ್ದಾರೆ.

ಸುಮಾರು 30 ಲಕ್ಷ ಶಿಕ್ಷಕರು ಸದಸ್ಯತ್ವ ಹೊಂದಿದ ಅಖಿಲ ಭಾರತ ಶಿಕ್ಷಕರ ಫೆಡರೇಶನ್​ ಅಧ್ಯಕ್ಷ ಹುದ್ದೆ ಮೊದಲ ಬಾರಿಗೆ ಕರ್ನಾಟಕ ರಾಜ್ಯಕ್ಕೆ ದೊರಕಿದೆ. 1954ರಲ್ಲಿ ಸ್ಥಾಪಿತವಾದ ಫೆರಡೇಶನ್​ 75 ವರ್ಷಗಳ ಸಂಘಟನೆಯ ಇತಿಹಾಸ ಹೊಂದಿದೆ. ಬಸವರಾಜ ಗುರಿಕಾರ ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸತತ 36 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದಾರೆ. ಸದ್ಯ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿದ್ದ ಗುರಿಕಾರ, ಕೇರಳದ ಕೊಚ್ಚಿಯಲ್ಲಿ ಸೋಮವಾರ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹೋರಾಟದ ಮೂಲಕ ಶಿಕ್ಷಕರ ನೇಮಕಾತಿ ಸಕ್ರಮ ಗೊಳಿಸಿ ತಮ್ಮ ಶಿಕ್ಷಕ ವೃತ್ತಿ ಆರಂಭಿಸಿದ ಬಸವರಾಜ ಗುರಿಕಾರ, ತಾಲೂಕು, ಜಿಲ್ಲಾ ಮಟ್ಟದ ಅಧ್ಯಕ್ಷರಾಗಿ ಕಳೆದ 45 ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ್ದಾರೆ. ರಾಜ್ಯ ಸರ್ಕಾರಿ ಸಂಘದ ಜಿಲ್ಲಾ ಅಧ್ಯಕ್ಷ, ರಾಜ್ಯದ ಹಿರಿಯ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ವಿವಿಧ ಪ್ರಗತಿಪರ ಸಂಘಟನೆಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net