ಲೋಕ ಅದಾಲತ್‌ನಲ್ಲಿ ಹೆಚ್ಚು ಪ್ರಕರಣ ಇತ್ಯರ್ಥ : ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಸಲಹೆ

New Project (20)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಬೆಳ್ತಂಗಡಿ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಭೇಟಿ ನೀಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಸರ್ಕಾರದಿಂದ ಮಂಜೂರಾಗಿರುವ ಅನುದಾನದ ವಿಚಾರದಲ್ಲಿ ಬೆಳ್ತಂಗಡಿಯ ನ್ಯಾಯಾಧೀಶರು ಮತ್ತು ವಕೀಲರ ಸಂಘದ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು.

ಜಿಲ್ಲಾ ನ್ಯಾಯಾಧೀಶ ಬಸವರಾಜ್ ಮಾತನಾಡಿ, ವಕೀಲರ ಸಂಘದ ಮನವಿಯಂತೆ ಹೈಕೋರ್ಟ್‌ಗೆ ಸೂಕ್ತ ಪ್ರಸ್ತಾವನೆ ಸಲ್ಲಿಸುವುದಾಗಿ ಭರವಸೆ ನೀಡಿ, ಜುಲೈ 12ರಂದು ನಡೆಯುವ ಲೋಕ ಅದಾಲತ್‌ನಲ್ಲಿ ಹೆಚ್ಚು ಹೆಚ್ಚು ಪ್ರಕರಣಗಳನ್ನು ರಾಜಿ ಪಂಚಾಯಿತಿ ಮೂಲಕ ಇತ್ಯರ್ಥಪಡಿಸುವಂತೆ ವಕೀಲರಲ್ಲಿ ಮನವಿ ಮಾಡಿದರು.

ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಮಾತನಾಡಿ, ನೂತನ ನ್ಯಾಯಾಲಯ ಸಂಕೀರ್ಣವನ್ನು ಈಗ ಇರುವ 60 ವರ್ಷ ಹಳೆಯದಾದ ಕಟ್ಟಡ ಇರುವ ಜಾಗದಲ್ಲಿಯೇ ನಿರ್ಮಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ, ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಮನು ಬಿ.ಕೆ., ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಸಂದೇಶ್, ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ವಿಜಯೇಂದ್ರ ಟಿ.ಎಚ್., ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಲೋಬೋ ಉಪಸ್ಥಿತರಿದ್ದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ. ಸ್ವಾಗತಿಸಿದರು. ಹೆಚ್ಚುವರಿ ಸರ್ಕಾರಿ ವಕೀಲ ಮನೋಹರ ಕುಮಾರ್ ಎ. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net