ರೌಡಿಗಳ ಸಹವಾಸವಿಲ್ಲ, ಬಿಜೆಪಿ ನಿಲುವು ಸ್ಪಷ್ಟ: ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿಕೆ

bommai
Published on

ಬೆಂಗಳೂರು: ರೌಡಿಗಳ ಸಹವಾಸವಿಲ್ಲ, ಪ್ರೋತ್ಸಾಹಿಸುವುದೂ ಇಲ್ಲ ಮತ್ತು ಪಕ್ಷ ಸೇರ್ಪಡೆಗಂತೂ‌ ಅವಕಾಶ ಇಲ್ಲವೇ ಇಲ್ಲ. ಇದು, ಬಿಜೆಪಿ ಸ್ಪಷ್ಟ ನಿಲುವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ನಿಮಿತ್ತ ವಿಧಾನಸೌಧ ಆವರಣದಲ್ಲಿ ಅವರ ಪ್ರತಿಮೆಗೆ ಗುರುವಾರ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಯಾವ ರೌಡಿಯೊಂದಿಗೆ ಯಾವ ನಾಯಕರು ಸಹವಾಸ ಮಾಡಿದ್ದಾರೋ ಗೊತ್ತಿಲ್ಲ, ಈ ಬಗ್ಗೆ ಹೆಚ್ಚು ಮಾತನಾಡಲು ಬಯಸುವುದಿಲ್ಲ ಎಂದು ಎಲ್ಲ ಪ್ರಶ್ನೆಗಳನ್ನು ತಳ್ಳಿಹಾಕಿದರು.

ಮಹಾರಾಷ್ಟ್ರ ಎತ್ತಿರುವ ಗಡಿ ತಕರಾರು, ಸುಪ್ರೀಂ ಕೋರ್ಟ್​ಗೆ ಸಲ್ಲಿಸಿರುವ ಅರ್ಜಿ ಮೆಂಟೇನಿಬಿಲಿಟಿ ಇಲ್ಲವೆಂಬ ಕರ್ನಾಟಕದ ನಿರ್ಧಾರ ಅಚಲ. ಈ ವಿಷಯದಲ್ಲಿ ಕಾನೂನು ಹೋರಾಟಕ್ಕೆ ನಮ್ಮ ರಾಜ್ಯದ ಕಾನೂನು ತಂಡ ಸಜ್ಜಾಗಿದೆ ಎಂದು ಸಿಎಂ ಬೊಮ್ಮಾಯಿ‌ ಪುನರುಚ್ಚರಿಸಿದರು.

ಚರ್ಚಿಸಿಲ್ಲ

ಮುಸ್ಲಿಂ ಯುವತಿಯರಿಗೆ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಸಂಬಂಧಿಸಿ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆಯಾಗಿಲ್ಲ. ಈ ಕುರಿತು ಯಾವುದೇ ಆದೇಶ ಹೊರಡಿಸಿಲ್ಲ. ವಕ್ಫ್ ಬೋರ್ಡ್ ಅಧ್ಯಕ್ಷರ‌ ಜತೆಗೂ ಮಾತನಾಡುವೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net