ಬಸವರಾಜ ರಾಯರಡ್ಡಿ ಹೇಳಿಕೆಗೆ ಖಂಡನೆ

lng Veerangowda lekkihala
ವೀರನಗೌಡ ಪಾಟೀಲ್ ಲೆಕ್ಕಿಹಾಳ
Published on

ಲಿಂಗಸುಗೂರು: ಗ್ಯಾರಂಟಿ ಬೇಡ ಎಂದರೆ ರಸ್ತೆ ಅಭಿವೃದ್ಧಿ ಮಾಡ್ತೀವಿ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ನೀಡಿರುವ ಹೇಳಿಕೆಯನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರನಗೌಡ ಪಾಟೀಲ್ ಲೆಕ್ಕಿಹಾಳ ಖಂಡಿಸಿದ್ದಾರೆ.

ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯರಡ್ಡಿ ಹೇಳಿಕೆ ಒಪ್ಪುವುದಿಲ್ಲ. ಗ್ಯಾರಂಟಿ ಹೆಸರಿನಲ್ಲಿ ರಾಜ್ಯದ ಅಭಿವೃದ್ಧಿ ಶೂನ್ಯ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿರುವುದು ಹಾಗೂ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡಲು ಸಾಧ್ಯವಾಗುತ್ತಿಲ್ಲ ಎಂಬುದು ರಾಯರೆಡ್ಡಿ ಹೇಳಿಕೆಯಿಂದ ಗೊತ್ತಾಗುತ್ತದೆ. ಗ್ಯಾರಂಟಿ ಯೋಜನೆ ನಿಲ್ಲಿಸಬೇಕೆಂಬ ಉದ್ದೇಶದಿಂದ ಇಂಥ ಹೇಳಿಕೆಗಳನ್ನು ಹೇಳಿಸುತ್ತಿದ್ದಾರೆ ಎಂದರು.

ನೆಲಮಂಗಲದ ತೈಲೇಶ್ವರ ಗಾಣಿಗ ಮಠಕ್ಕೆ ಮಂಜೂರಾದ ಅನುದಾನ ಬಿಡುಗಡೆಯಲ್ಲಿ ಸಚಿವ ಶಿವರಾಜ ತಂಗಡಗಿ ಕಮೀಷನ್ ಕೇಳಿದ್ದಾರೆಂದು ಶ್ರೀಗಳೊಬ್ಬರು ಆರೋಪಿಸಿದ್ದಾರೆ. ಅಲ್ಲದೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ಕೇಸ್ ರಾಜ್ಯ ಹೈಕೋರ್ಟ್ ಸಿಬಿಐಗೆ ಒಪ್ಪಿಸುವಂತೆ ತಿಳಿಸಿದೆ.

ಇದರಿಂದ ರಾಜ್ಯ ಬಿಜೆಪಿ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ ಎಂದರು. ಬಿಜೆಪಿ ಮಂಡಲ ಅಧ್ಯಕ್ಷ ಕೆ. ನಾಗಭೂಷಣ, ಗಿರಿಮಲ್ಲನಗೌಡ ಪಾಟೀಲ್, ಪರಶುರಾಮ ನಗನೂರು, ಅಮರೇಶ ಹಿರೇಹೆಸರೂರು, ಮುದಕಪ್ಪ ನಾಯಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net