

ವಿಜಯವಾಣಿ ಸುದ್ದಿಜಾಲ ಧಾರವಾಡ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನದ ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ನಿಂದ ಪಂ. ಬಸವರಾಜ ರಾಜಗುರು ಅವರ 105ನೇ ಜನ್ಮ ದಿನಾಚರಣೆ, ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಷ್ಟ್ರೀಯ ಸಂಗೀತೋತ್ಸವ ಕಾರ್ಯಕ್ರಮವನ್ನು ಆ. 24ರಂದು ಸಂಜೆ 5.30ಕ್ಕೆ ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.
2025- 26ನೇ ಸಾಲಿನ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿಯನ್ನು ಪುಣೆಯ ಸುಪ್ರಸಿದ್ಧ ಸಂಗೀತ ಕಲಾವಿದ ಪಂ. ಸುಹಾಸ ವ್ಯಾಸ ಪುಣೆ ಅವರಿಗೆ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 1 ಲಕ್ಷ ರೂ. ನಗದು ಒಳಗೊಂಡಿದೆ. ಧಾರವಾಡದ ವಯೋಲಿನ್ ವಾದಕಿ ವೀಣಾ ಮಠ (ದಂಡಾವತಿಮಠ) ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ಗ್ರಾಮದ ಹಾರ್ಮೋನಿಯಂ ವಾದಕ ಚಿದಂಬರ ಜೋಶಿ ಅವರಿಗೆ ಯುವ ಪ್ರಶಸ್ತಿ ನೀಡಲಾಗುವುದು. ಇದು 25,000 ರೂ. ನಗದು ಒಳಗೊಂಡಿದೆ.