ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.96 ಲಕ್ಷ ಕ್ಯೂಸೆಕ್ ನೀರು; ಶೀಲಹಳ್ಳಿ ಸೇತುವೆ ಮುಳುಗಡೆ

190820 Shilahalli Bridge Sink
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಬಿಟ್ಟ ಪ್ರಯುಕ್ತ ಶೀಲಹಳ್ಳಿ ಸೇತುವೆ ಮೇಲೆ ನೀರು ಹರಿಯುತ್ತಿರುವುದು.
Published on

ಲಿಂಗಸುಗೂರು: ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.96 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟಿದ್ದರಿಂದ ನದಿಯಲ್ಲಿ ಪ್ರವಾಹ ಹೆಚ್ಚಾಗಿದ್ದು, ತಾಲೂಕಿನ ಶೀಲಹಳ್ಳಿ ಬಳಿಯ ಸೇತುವೆ ಮೇಲೆ ಬುಧವಾರ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದೆ.

ಮಹಾರಾಷ್ಟ್ರದ ಕೊಯ್ನ ಜಲಾಶಯ ಭರ್ತಿಯಾಗಿ ಆಲಮಟ್ಟಿ ಆಣೆಕಟ್ಟೆಗೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಬಸವಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಿದೆ. ಶೀಲಹಳ್ಳಿ ಸೇತುವೆ ಮೇಲೆ ಸಾರ್ವಜನಿಕರು ಮತ್ತು ವಾಹನ ಸಂಚಾರ ಸ್ಥಗಿತಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸೇತುವೆ ಎರಡೂ ಬದಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನದಿ ತೀರದ ಶೀಲಹಳ್ಳಿ, ಕಡದರಗಡ್ಡಿ, ಯರಗೋಡಿ, ಹಂಚಿನಾಳ ಗ್ರಾಮಗಳ ಸಾರ್ವಜನಿಕರು ಜಲದುರ್ಗ ಮಾರ್ಗವಾಗಿ ತಾಲೂಕು ಕೇಂದ್ರಕ್ಕೆ 45 ಕಿಮೀ. ಸುತ್ತುವರಿದು ಸಂಚರಿಸುವಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net