ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ..

BSY
Published on

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ಇಂದು ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ಶಿವಮೊಗ್ಗದ ಬೆಕ್ಕಿನ ಕಲ್ಮಠದಿಂದ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಿವಮೊಗ್ಗದಲ್ಲಿ ಇಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ‌ ಶ್ರೀಗಳು ಮತ್ತು ಸಿರಿಗೆರೆ ಶ್ರೀಗಳಿಂದ ಪ್ರಶಸ್ತಿ ಸ್ವೀಕರಿಸಿದರು.

ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿರುವ ಹಿನ್ನೆಲೆಯಲ್ಲಿ ಶ್ರೀಮಠದಿಂದ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾ‌ನ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net