ಬಸವೇಶ್ವರ -ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ

BASAVA JAYANTI DC OFFICE
ವಿಜಯಪುರದ ಮಹಾತ್ಮ ಬಸವೇಶ್ವರ ವೃತ್ತದಲ್ಲಿರುವ ಪುತ್ಥಳಿಗೆ ಎಸ್‌ಪಿ ರಿಷಿಕೇಶ ಸೋನಾವಣೆ ಹಾಗೂ ಸಿಇಒ ರಿಷಿ ಆನಂದ ಗೌರವ ಸಮರ್ಪಿಸಿದರು.
Published on

ವಿಜಯಪುರ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಗಜ್ಯೋತಿ ಬಸವೇಶ್ವರ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು.

ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅತ್ಯಂತ ಸರಳವಾಗಿ ಶಿಷ್ಟಾಚಾರದಂತೆ ಆಚರಿಸಲಾಯಿತು.
ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಪಂ ಸಿಇಒ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತಹಸೀಲ್ದಾರ್ ಕವಿತಾ ಅವರು ಬಸವಣ್ಣನವರ ಹಾಗೂ ಶಿವಶರಣೆ ಹೆಮರಡ್ಡಿ ಮಲ್ಲಮ್ಮ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಗೌರವ ಸಮರ್ಪಿಸಿದರು.

ಇದಕ್ಕೂ ಮೊದಲು ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಗೆ ಜಿಪಂ ಸಿಇಒ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೊನಾವಣೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಮುಖಂಡರಾದ ಶರಣು ಸಬರದ, ಭೀಮರಾಯ ಜಿಗಜಿನ್ನಿ, ಹಣಮಂತ ಮಾಚಪ್ಪನವರ, ಸುರೇಶ ದೇಸಾಯಿ, ಕೆ.ಕೆ. ಬನ್ನೆಟ್ಟಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net