

ಬಸವಕಲ್ಯಾಣ: ಶ್ರೀ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿ ಹಾಗೂ ವಿಶ್ವಸ್ಥ ಸಮಿತಿಯಿಂದ ಆಯೋಜಿಸಿರುವ ಮಹಾತ್ಮ ಬಸವೇಶ್ವರರ ಜಾತ್ರಾ ಮಹೋತ್ಸವದ ಎರಡನೇ ದಿನವಾದ ಶನಿವಾರ ಸಂಜೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಪಲ್ಲಕ್ಕಿ ಮತ್ತು ನಂದಿ ಧ್ವಜ ಪೂಜೆ ಜರುಗಿತು.
ಹಾರಕೂಡ ಸಂಸ್ಥಾನ ಹಿರೇಮಠದ ಶ್ರೀ ಡಾ.ಚನ್ನವೀರ ಶಿವಾಚಾರ್ಯರು ಪೂಜೆ ನೆರವೇರಿಸಿದರು.ಬಸವ ಭಕ್ತರಿಂದ ಬಸವೇಶ್ವರ ಮಹಾರಾಜ ಕೀ ಜೈ ಎಂಬ ಘೋಷಣೆಗಳು ಮೊಳಗಿದವು.
ನಂದಿ ಧ್ವಜ ಸಮಿತಿಯ ಅಧ್ಯಕ್ಷ ಮಲ್ಲಯ್ಯ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಶರಣು ಸಲಗರ, ಬಿಡಿಪಿಸಿ ಅಧ್ಯಕ್ಷ ಬಸವರಾಜ ಕೋರಕೆ, ಉಪಾಧ್ಯಕ್ಷ ಮಲ್ಲಿಕಾರ್ಜುನ ಚಿರಡೆ, ಬಿಡಿವಿಸಿ ಅಧ್ಯಕ್ಷ ಶಶಿಕಾಂತ ದುರ್ಗೆ, ಉಪಾಧ್ಯಕ್ಷ ಡಾ. ಜಿ.ಎಸ್ ಭುರಳೆ, ಬಿಡಿಪಿಸಿ ಕೋಶಾಧ್ಯಕ್ಷ ರಾಜಕುಮಾರ ಹೊಳಕುಂದೆ, ಕಾರ್ಯದರ್ಶಿ ಶ್ರೀಕಾಂತ ಬಡದಾಳೆ, ಸಹ ಕಾರ್ಯದರ್ಶಿ ವಿವೇಕಾನಂದ ಹೊದಲೂರೆ, ನಿರ್ದೇಶಕರಾದ ಕಾಶೆಪ್ಪ ಸಕ್ಕರಬಾವಿ, ವೀರಣ್ಣ ಹಲಶೆಟ್ಟೆ, ಸುಭಾಷ ಹೊಳಕುಂದೆ, ಅಶೋಕ ನಾಗರಾಳೆ, ಜಗನ್ನಾಥ ಖೂಬಾ, ಭದ್ರಿನಾಥ ಪಾಟೀಲ, ಅನೀಲಕುಮಾರ ರಗಟೆ, ರೇವಣಪ್ಪ ರಾಯವಾಡೆ, ವಿಜಯಲಕ್ಷ್ಮೀ ಗಡ್ಡೆ, ಪಲ್ಲಕ್ಕಿ ಸಮಿತಿಯ ಅಧ್ಯಕ್ಷ ರಮೇಶಕುಮಾರ ಮುಗಳೆ, ವಿಶ್ವಸ್ಥ ಸಮಿತಿಯ ಕಾರ್ಯದರ್ಶಿ ನಾಗಯ್ಯಸ್ವಾಮಿ, ಕೋಶಾಧ್ಯಕ್ಷ ಶಿವರಾಜ ಶಾಶೆಟ್ಟೆ, ವಿಶ್ವಸ್ಥರಾದ ಗದಗೆಪ್ಪ ಹಲಶೆಟ್ಟೆ, ಬಸವರಾಜ ಪಾಟೀಲ್, ಸೋಮಶೇಖರ ವಸ್ತçದ, ಮಲ್ಲಿಕಾರ್ಜುನ ಮಂಠಾಳೆ, ಮಹೇಶ ಸುಂಟನೂರೆ, ಜಗನ್ನಾಥ ಪಾಟೀಲ್ ಹಾಗೂ ಬಸವ ಭಕ್ತರು ಪಾಲ್ಗೊಂಡಿದ್ದರು.