

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರ ಜಯಂತಿಯನ್ನು ಏ. 30ರಂದು ಸಂಜೆ 5 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ, ಎಸ್.ವಿ. ಸಂಕನೂರ, ಪ್ರದಿಪ ಶೆಟ್ಟರ, ನಿಗಮ ಮಂಡಳಿ ಅಧ್ಯಕ್ಷರು, ಅಧಿಕಾರಿಗಳು ಆಗಮಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು. ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕ ಡಾ. ಗಿರೀಶ ದೇಸೂರ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.