

ಗುಂಡ್ಲುಪೇಟೆ: ತಾಲೂಕಿನ ಮೂಡಗೂರು ಗ್ರಾಮದ ಶ್ರೀಕಾಳಿಕಾಂಬ ದೇವಾಲಯದಲ್ಲಿ ವಿಜಯದಶಮಿಯ ಪ್ರಯುಕ್ತ ವಿಶೇಷ ಪೂಜೆ, ಬಸವೇಶ್ವರಮೂರ್ತಿ ಮೆರವಣಿಗೆ ನಡೆಯಿತು.
ಈ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾ ತಂಡಗಳು, ಮಂಗಳವಾದ್ಯಗಳೊಂದಿಗೆ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಮೂಡಗೂರು ಮಠದ ಶ್ರೀ ಉದ್ಯಾನ ಸ್ವಾಮೀಜಿ, ಗ್ರಾಮಸ್ಥರು ಭಾಗವಹಿಸಿದ್ದರು. ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಲಾಯಿತು.