ಬಸವ ಪುತ್ಥಳಿ ಪ್ರತಿಷ್ಠಾಪನೆ ದೂರು ದಾಖಲು

Basava Statue
Published on

ತಿಪಟೂರು: ಬಸವ ಪುತ್ಥಳಿ ಪ್ರತಿಷ್ಠಾಪನೆ ಪ್ರಕರಣಕ್ಕೆ ಸಂಬಂದಿಸಿದಂತೆ ನಗರಾಯುಕ್ತರು ನೀಡಿದ ದೂರಿನ ಹಿನ್ನೆಲೆಯಲ್ಲಿ ತಿಪಟೂರು ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.

ನಗರದ ಕೋಡಿ ಸರ್ಕಲ್‌ನಲ್ಲಿ ಭಾನುವಾರ ರಾತ್ರಿ ಏಕಾಏಕಿ ಸಾಂಸ್ಕೃತಿಕ ನಾಯಕ ಬಸವೇಶ್ವರರ ಕಲ್ಲಿನ ಪ್ರತಿಮೆಯನ್ನು ಪ್ರತಿಷ್ಠಾಪಿದ್ದು ಸೋಮವಾರ ಪ್ರಕ್ಷೃಬ್ಧ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿತ್ತು. ಅಲ್ಲದೆ, ಲೋಕ ಚುನಾವಣೆ ನೀತಿ ಸಂಹಿತೆ ಸಂದರ್ಭದಲ್ಲಿ ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದ ಪುತ್ಥಳಿಯನ್ನು ನಗರಸಭೆ ಸಿಬ್ಬಂದಿ ತೆರವುಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ನಗರಾಯುಕ್ತರ ದೂರಿನಂತೆ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಗೊಂಡಿದೆ.

ರಾತ್ರೋ, ರಾತ್ರಿ, ವಿಶ್ವ ಸಾಂಸ್ಕೃತಿಕ ನಾಯಕ, ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪಿಸಿ, ನಂತರ ಕಾನೂನಾತ್ಮಕ ಸಮಸ್ಯೆ ಕಾರಣದಿಂದ ಪುತ್ಥಳಿಯನ್ನು ತೆರವುಗೊಳಿಸುವಂತಾಗಿದ್ದು ವೀರಶೈವ ಸಮಾಜದ ಮುಖಂಡರ ಗಮನಕ್ಕೆ ತಂದು ಸರ್ಕಾರದಿಂದ ಅನುಮತಿ ಪಡೆದು ಅದ್ದೂರಿಯಾಗಿ ಪ್ರತಿಮೆ ಪ್ರತಿಷ್ಠಾಪಿಸಬಹುದಿತ್ತು ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net