

ಧಾರವಾಡ: ಶಿಕ್ಷಣ ಕ್ಷೇತ್ರಕ್ಕೆ ಬಾಸೆಲ್ ಮಿಷನ್ ಶಿಕ್ಷಣ ಸಂಸ್ಥೆಯ ಕೊಡುಗೆ ಅಮೋಘವಾದುದು. ಜರ್ಮನಿಯ ಮಿಷನರಿ ಕಿಟೆಲ್ ಅವರು ಕನ್ನಡಕ್ಕೆ ನೀಡಿದ ಕೊಡುಗೆ ಶ್ಲಾಘನೀಯ ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪ ನಿರ್ದೇಶಕ ಕೆ.ಪಿ. ಸುರೇಶ ಹೇಳಿದರು.
ನಗರದ ಕಿಟೆಲ್ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ಸರ್ವತೋಮುಖ ಬೆಳವಣಿಗೆಯೊಂದಿಗೆ ದೇಶ ಕಟ್ಟಲು ಸತತ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ಕೆ.ಎನ್.ಡಿ., ಸಿ.ಎಸ್.ಐನ ಖಜಾಂಚಿ ರೆ. ಸತ್ಯಬಾಬು ಸ್ಯಾಮುವೆಲ್ ಮಾತನಾಡಿ, ಪ್ರತಿಯೊಬ್ಬರಲ್ಲೂ ವಿಶಿಷ್ಟ ಪ್ರತಿಭೆ ಇರುತ್ತದೆ. ಮತ್ತೊಬ್ಬರಿಗೆ ಹೋಲಿಸಿಕೊಂಡು ಕೀಳರಿಮೆ ಬೆಳೆಸಿಕೊಳ್ಳದೆ ಧನಾತ್ಮಕ ವಿಚಾರಧಾರೆ ಬೆಳೆಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯೆ ಸವಿತಾ ನಂದಿಕೇಶ್ವರ ಮಾತನಾಡಿ, ಆತ್ಮವಿಶ್ವಾಸ, ಸತತ ಪ್ರಯತ್ನ ಹಾಗೂ ದೃಢ ಕಾರ್ಯನಿಷ್ಠೆಯಿಂದ ವಿದ್ಯಾರ್ಥಿಗಳು ಗುರಿ ಮುಟ್ಟಲು ಸಾಧ್ಯ ಎಂದರು.
ಕಿಟೆಲ್ ವಿಜ್ಞಾನ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಕ್ರಿಸ್ಟೋಫರ್ ಭಾಸ್ಕರ, ವಿದ್ಯಾರ್ಥಿ ಪ್ರತಿನಿಽ ಪರಿಷತ್ತಿನ ಸಂಚಾಲಕ ಜಾವೇದ ಮೂಡಿ ಹಾಗೂ ವಿದ್ಯಾರ್ಥಿ ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ, ಇತರರಿದ್ದರು.