ಬಾಶೆಟ್ಟಿಹಳ್ಳಿ ಬೀದಿ ಬದಿ ಅಂಗಡಿಗಳ ತೆರವು

bhashettihalli
Published on

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ವರಮಹಾಲಕ್ಷ್ಮೀ ಹಬ್ಬದಂದೇ ಬೀದಿ ಬದಿ ವ್ಯಾಪಾರಿಗಳಿಗೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಶಾಕ್ ನೀಡಿದೆ. ಬ್ಯಾಂಕ್ ವೃತ್ತದ ಮೇಲ್ಸೇತುವೆಯಿಂದ ಆರಂಭವಾಗಿ ಎರಡೂ ಕಡೆ ಬೀದಿ ಬದಿ ವ್ಯಾಪಾರದಿಂದ ವಾಹನ ದಟ್ಟಣೆ ಹೆಚ್ಚಾಗಿತ್ತು. ಅಲ್ಲದೇ ಸಾಕಷ್ಟು ಅಪಘಾತಗಳಿಗೂ ಕಾರಣವಾಗಿತ್ತು. ಬೀದಿ ಬದಿ ವ್ಯಾಪಾರಿಗಳಿಗೆ ಕಡಿವಾಣ ಹಾಕುವಂತೆ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನರಸಿಂಹಮೂರ್ತಿ ನೇತೃತ್ವದಲ್ಲಿ ಪಪಂ ಸಿಬ್ಬಂದಿ ಅಂಗಡಿಗಳನ್ನು ತೆರವುಗೊಳಿಸಿದರು.
ಈ ವೇಳೆ ವ್ಯಾಪಾರಿಗಳು ಹಾಗೂ ಅಧಿಕಾರಿಗಳ ಮಧ್ಯೆ ವಾಗ್ವಾದ ನಡೆಯಿತು. ಶೀಘ್ರ ಅಂಗಡಿಗಳನ್ನು ತೆರವು ಮಾಡಬೇಕು. ಇಲ್ಲವಾದಲ್ಲಿ ನಾವೇ ನಿರ್ಧಾಕ್ಷಿಣ್ಯವಾಗಿ ಅಂಗಡಿ ಮುಂಗಟ್ಟುಗಳನ್ನು ತೆರವು ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದರು. ಕೆಲವರು ವಿಧಿ ಇಲ್ಲದೆ ತಮ್ಮ ಅಂಗಡಿಗಳನ್ನು ಮುಚ್ಚಿದರು. ಮತ್ತೆ ಕೆಲವರು ಅಧಿಕಾರಿಗಳೊಂದಿಗೆ ಜಗಳಕ್ಕಿಳಿದು ಕಾರ್ಯ ಸಾಧಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net