

ವಿಜಯವಾಣಿ ಸುದ್ದಿಜಾಲ ಗದಗ
ನಮ್ಮ ಸಂವಿಧಾನದಲ್ಲಿರುವ ಮೂಲಭೂತ ಹಕ್ಕುಗಳು ಸಾಮಾಜಿಕ ನ್ಯಾಯದ ತಳಹದಿಗಳಾಗಿವೆ. ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಿ ಪ್ರತಿಯೊಬ್ಬರಿಗೆ ನ್ಯಾಯ ದೊರಕುವಂತಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿರ್ಗಳು, ಹಿರಿಯ ದಿವಾಣಿ ನ್ಯಾಯಾಧೀಶ ಕೆ. ಗುರುಪ್ರಸಾದ ಹೇಳಿದರು.
ನಗರದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಗುರುವಾಜ ಜರುಗಿದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾನತೆಯ ಪರಿಕಲ್ಪನೆಯಡಿ 2007 ರಲ್ಲಿ ವಿಶ್ವ ಸಂಸ್ಥೆಯಲ್ಲಿ ಠರಾವು ಪಾಸ್ ಮಾಡಲಾಗಿದ್ದು, ಅದರ ಪ್ರಕಾರ ವಿಶ್ವದಾದ್ಯಂತ 2009 ರಿಂದ ಪ್ರತಿ ವರ್ಷ ೆಬ್ರುವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಆಚರಿಸುತ್ತ ಬರಲಾಗಿದೆ ಎಂದು ತಿಳಿಸಿದರು.
ಸಂವಿಧಾನದ ಪೀಠಿಕೆಯಲ್ಲಿರುವ ಪ್ರಮುಖ ಅಂಶಗಳಲ್ಲಿ ಸಾಮಾಜಿಕ ನ್ಯಾಯವೂ ಒಂದು. ನಮ್ಮ ಸಮಾಜದಲ್ಲಿರುವ ಜನರ ಮದ್ಯೆ ಜಾತಿ ಧರ್ಮಾಧಾರಿತ, ಲಿಂಗಾಧಾರಿತ ವ್ಯತ್ಯಾಸಗಳಿವೆ. ಅವುಗಳನ್ನು ಹೋಗಲಾಡಿಸಿ ಪ್ರತಿಯೊಬ್ಬರಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಮೀಸಲಾತಿ ಸೇರಿದಂತೆ ಹತ್ತು ಹಲವು ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದರು.
ತಾಲೂಕು ಸಮಾಜ ಕಲ್ಯಾಣಾಧಿಕಾರಿ ವಿಜಯಲಕ್ಷಿ$್ಮ ಇಂಗಳಳ್ಳಿ ಮಾತನಾಡಿದರು. ಶಿಕ್ಷಕರು, ವಿದ್ಯಾಥಿರ್, ವಿದ್ಯಾಥಿರ್ನಿಯರು ಇದ್ದರು.