ಬಾಸ್ಕೆಟ್‌ಬಾಲ್ ಅಂಕಣ ಉದ್ಘಾಟನೆ

ಬಾಸ್ಕೆಟ್‌ಬಾಲ್ ಅಂಕಣ ಉದ್ಘಾಟನೆ
Published on

ವಿರಾಜಪೇಟೆ: ವಿರಾಜಪೇಟೆ ಜೂನಿಯರ್ ಕಾಲೇಜು ಮೈದಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಬಾಸ್ಕೆಟ್‌ಬಾಲ್ ಅಂಕಣವನ್ನು ಭಾನುವಾರ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.

ಬಾಸ್ಕೆಟ್ ಬಾಲ್ ಅಂಕಣ ನಿರ್ಮಿಸಿಕೊಡುವಂತೆ ಈ ಭಾಗದ ಜನರು ಶಾಸಕ ಪೊನ್ನಣ್ಣ ಅವರ ಬಳಿ ಮನವಿ ಮಾಡಿದ್ದರು. ಈ ಹಿನ್ನೆಲೆ ಬಾಸ್ಕೆಟ್ ಬಾಲ್ ಅಂಕಣ ನಿರ್ಮಿಸಿ ಕ್ರೀಡಾಪಟುಗಳಿಗೆ ನೀಡಲಾಯಿತು.

ಈ ಸಂದರ್ಭ ಶಾಸಕ ಪೊನ್ನಣ್ಣ ಮಾತನಾಡಿ, ಕ್ರೀಡಾಪಟುಗಳು ಬಾಸ್ಕೆಟ್ ಬಾಲ್ ಅಂಕಣದ ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಚಿಲ್ಲವಂಡ ಕಾವೇರಪ್ಪ ಮಾತನಾಡಿದರು.

ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಿರಾಜಪೇಟೆ ಟೌನ್ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮಯ್ಯ,ಪುರಸಭೆ ಸದಸ್ಯ ಮತೀನ್, ಮಹಮ್ಮದ್ ರಾಫಿ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಿರಾಜಪೇಟೆ ಜೂನಿಯರ್ ಕಾಲೇಜಿನ ಪ್ರಾಂಶುಪಾಲರಾದ ಜ್ಯೋತಿ, ಅಜ್ಜಿಕುಟ್ಟಿರ ಗಿರೀಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net