ಬಸ್ರೂರು ಅಪ್ಪಣ್ಣ ಹೆಗ್ಡೆಗೆ ಪತ್ನಿ ವಿಯೋಗ

Nagarathna
Published on

ಕುಂದಾಪುರ: ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ಪತ್ನಿ ನಾಗರತ್ನಾ ಎ.ಹೆಗ್ಡೆ(80) ಭಾನುವಾರ ಬಸ್ರೂರಿನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಧಾರ್ಮಿಕ, ಸಾಮಾಜಿಕ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಪರಿಸದ ಜನರ ಅಮ್ಮಾ ಎಂದೇ ಕರೆಸಿಕೊಳ್ಳುತ್ತಿದ್ದರು. ಕೊಲ್ಲೂರಿನ ಕೂಡೂರು ಮೂಲದವರಾಗಿದ್ದು, ವಿವಾಹ ಬಳಿಕ ಬಸ್ರೂರು ಸೇರಿದ್ದರು. ಕೂಡು ಕುಟುಂಬದ ಜವಾಬ್ದಾರಿ ಹೊತ್ತು ಪತಿಗೆ ರಾಜಕೀಯ, ಸಾಮಾಜಿಕ, ಧಾರ್ಮಿಕ ಸೇವೆಗೆ ಅವಕಾಶ ಕಲ್ಪಿಸಿದ್ದರು. ಮೇನಲ್ಲಿ ದಾಂಪತ್ಯ ಜೀವನದ 60 ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಪತಿ, ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಸೋಮವಾರ ಮಧ್ಯಾಹ್ನ ಕೂಡೂರು ಮನೆಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದ್ದು, ಬೆಳಗ್ಗೆ 9ರಿಂದ 11ರವರೆಗೆ ಬಸ್ರೂರು ಮನೆಯಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net