

ವಿಜಯವಾಣಿ ಸುದ್ದಿಜಾಲ ಉಡುಪಿ
ಭಾರತೀಯ ರೆಡ್ ಕ್ರಾಸ್ಗೆ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ತನ್ನದೇ ಆದ ವಿಶೇಷತೆಯಿದೆ. ನನಗೆ ದೊರೆತ ಅವಕಾಶದ ಈ ಸಂದರ್ಭವನ್ನು ರಾಜ್ಯದ ಎಲ್ಲ ಜಿಲ್ಲೆಗಳನ್ನು ಸಮಾನವಾಗಿ ನೋಡಿಕೊಳ್ಳುತ್ತೇನೆ. ಉಡುಪಿ ಜಿಲ್ಲೆಗೆ ವಿಶೇಷ ಆದ್ಯತೆ ಕೊಡುತ್ತೇನೆ ಎಂದು ರಾಜ್ಯ ರೆಡ್ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಭರವಸೆ ನೀಡಿದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ರಾಜ್ಯ ರೆಡ್ ಕ್ರಾಸ್ನ ಪ್ರತಿನಿಧಿಯಾಗಿದ್ದ ವಿ.ಜಿ. ಶೆಟ್ಟಿ ಸನ್ಮಾನಿಸಿದರು. ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಸುವರ್ಣ, ಇಲಾಖೆಯ ಯೋಜನಾಧಿಕಾರಿ ಶಿವಾಜಿ. ಎ.ಕೆ., ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ, ರೆಡ್ಕ್ರಾಸ್ನ ಆಡಳಿತ ಮಂಡಳಿ ಸದಸ್ಯ ಚಂದ್ರಶೇಖರ, ಮಾಜಿ ಕಾರ್ಯದರ್ಶಿಗಳಾದ ಬಾಲಕೃಷ್ಣ ಶೆಟ್ಟಿ, ರತ್ನಾಕರ ಶೆಟ್ಟಿ, ಡಿಡಿಆರ್ಸಿ ನೋಡಲ್ ಅಧಿಕಾರಿ ಜಯಶ್ರೀ ಉಪಸ್ಥಿತರಿದ್ದರು.
ಜಿಲ್ಲಾ ರೆಡ್ಕ್ರಾಸ್ನ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು. ಖಚಾಂಚಿ ರಮಾದೇವಿ ವಂದಿಸಿದರು.