

ಶಿಗ್ಗಾಂವಿ: ಕೆರೆಯಲ್ಲಿ ಸ್ನಾನ ಮಾಡಲು ಹೋಗಿ ಯುವಕನೊಬ್ಬ ನೀರಿನಲ್ಲಿ ಮುಳಗಿ ಮೃತಪಟ್ಟ ಘಟನೆ ತಾಲೂಕಿನ ನಾಗನೂರ ಕೆರೆಯಲ್ಲಿ ಬುಧವಾರ ನಡೆದಿದೆ.
ಪಟ್ಟಣದ ಜಯ ನಗರದ ನಿವಾಸಿ ಮೊಹ್ಮದ್ ಸಮೀರ್ ಕ್ಯಾಲಕೊಂಡ (19) ಮೃತ ಯುವಕ.
ಈತ ಕೆರೆಯಲ್ಲಿ ಸ್ನಾನ ಮಾಡಲು ಹೋದಾಗ ನೀರಿನಲ್ಲಿ ಮುಳಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.