ಕೆರೆಯಲ್ಲಿ ಮುಳಗಿ ಕುರಿಗಾಯಿ ಸಾವು

Crime Logo
Published on

ರಟ್ಟಿಹಳ್ಳಿ: ಕುರಿಗಳಿಗೆ ನೀರು ಕುಡಿಸಲು ಹೋದ ಕುರಿಗಾಯಿಯೊಬ್ಬ ನೀರಿನಲ್ಲಿ ಮುಳಗಿ ಮೃತಪಟ್ಟ ಘಟನೆ ತಾಲೂಕಿನ ಬತ್ತಿಕೊಪ್ಪದ ಗೋಕಟ್ಟೆ ಕೆರೆಯಲ್ಲಿ ನಡೆದಿದೆ.

ಗ್ರಾಮದ ಮಂಜಪ್ಪ ತಮ್ಮಣ್ಣ ಅಣಜಿ (38) ಮೃತ ಕುರಿಗಾಯಿ.

ಈತ ಕುರಿಗಳಿಗೆ ನೀರು ಕುಡಿಸಿ ಮೈ ತೊಳೆಯಲು ಎಂದು ಕೆರೆಗೆ ಇಳಿದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net